ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ನಿರ್ಧಾರ

0
11
loading...

ಬೆಂಗಳೂರು: ನೂತನ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್‍ನಲ್ಲಿ ಸಿಎಂ ಕುಮಾರಸ್ವಾಮಿ ಹಲವು ವಿನೂತನ ಆಕರ್ಷಕ ಯೋಜನೆಗಳೂ ಇದ್ದು, ಪ್ರಮುಖವಾಗಿ ಬಡ ಬ್ರಾಹ್ಮಣರಿಗೂ ಆರ್ಥಿಕ ನೆರವು ನೀಡಲು ಕುಮಾರಸ್ವಾಮಿ ಒಲವು ತೋರಿದ್ದಾರೆ.
ಬಡ ಬ್ರಾಹ್ಮಣರಿಗೆ ಆರ್ಥಿಕ ನೆರವು ಒದಗಿಸಲು ಮುಂದಾಗಿರುವ ಸಿಎಂ ಕುಮಾರಸ್ವಾಮಿ, ಈ ಹಿನ್ನೆಲೆಯಲ್ಲಿ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ನಿರ್ಧಾರ ಕೈಗೊಂಡಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರ ಅಭಿವೃದ್ಧಿಗೆ ಈ ಮೂಲಕ ಕ್ರಮ ಕೈಗೊಳ್ಳಲಾಗಿದೆ.
ಅಲ್ಲದೇ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ 25 ಕೋಟಿ ರೂ. ಮೀಸಲಿರಿಸಲಾಗಿದ್ದು, ಈ ಮಂಡಳಿ ಮೂಲಕ ಬಡ ಬ್ರಾಹ್ಮಣರಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಕುಮಾರಸ್ವಾಮಿ ಘೋಷಿಸಿದ್ದಾರೆ.

loading...