ರೈತರ ಸಂಪೂರ್ಣ ಸಾಲ‌ ಮನ್ನಾ ಮಾಡುವಂತೆ ಆಗ್ರಹಿಸಿ ಬೃಹತ್ ಪ್ರತಿಬಟನೆ

0
38
loading...

ರೈತರ ಸಂಪೂರ್ಣ ಸಾಲ‌ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

ಕನ್ನಡಮ್ಮ ಸುದ್ದಿ- ಬೆಳಗಾವಿ: ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ‌ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ‌ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ಕಟ್ಟುವ ಮೂಲಕ ಆಕ್ರೋಶ ವ್ಯಕ್ತ ಪಡಿಸಿದರು. ನಂತರ ಜಿಲ್ಲಾಧಿಕಾರಿ ಕಚೇರಿ ವರೆಗು ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸ್ತ್ರೀ ಶಕ್ತಿ,ಸ್ವ ಸಹಾಯ, ಧರ್ಮಸ್ಥಳ ಸಂಘಗಳಲ್ಲಿ‌ ಮಹಿಳೆಯರು ತೆಗೆದುಕೊಂಡ‌ ಸಾಲ‌ ಮನ್ನಾ ಹಾಗೂ ಕಳಸಾ ಬಂಡೂರಿ, ಮಹಾದಾಯಿ ಜಾರಿಗೊಳಿಸಬೇಕು. ಅಲ್ಲದೆ ರೈತರ ಕಬ್ಬಿನ ಬಾಕಿ ಬಿಲ್ ತಕ್ಷಣವೇ ವಸೂಲಿ ಮಾಡಬೇಕು ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರವಾದ ಹೋರಾಟ ನಡೆಸಲಾಗುವುದು ಎಂದು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಚುನಪ್ಪಾ ಪೂಜಾರಿ,ಲಿಂಗರಾಜ ಪಾಟೀಲ,ಅಶೋಕ ಯಮಕನಮರಡಿ,ರವಿ ಸಿದ್ದಣ್ಣವರ ಸೇರಿದಂತೆ ಅನೇಕ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

loading...