ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

0
11
loading...

ಕನ್ನಡಮ್ಮ ಸುದ್ದಿ-ಹಾವೇರಿ: ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಹಾವೇರಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ಸಿಐಟಿಯು ಜಿಲ್ಲಾ ಸಂಚಾಲಕÀ ವಿನಾಯಕ ಕುರುಬರ ಮಾತನಾಡಿ, ಈಗಾಗಲೇ ರಾಜ್ಯದಲ್ಲಿ ಎಲ್‌ಕೆಜಿ ಯುಕೆಜಿ ಮತ್ತು ಕಾನ್ವಂಟ್‌ಗಳಿಗೆ ಪಂಚಾಯತಿ, ಹೋಬಳಿ ಮತ್ತು ನಗರಗಳಲ್ಲಿ ನೀಡಿರುವುದರಿಂದ ಅಂಗನವಾಡಿ ಕೇಂದ್ರಗಳಿಗೆ ಬರುವ ಮಕ್ಕಳ ಸಂಖ್ಯೆ ದಿನೆ ದಿನಕ್ಕೆ ಹೆಚ್ಚಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಈಗಾಗಲೇ 35 ಕಡೆಗಳಲ್ಲಿ ಪ್ರಾಥಮಿಕ ಸರ್ಕಾರಿ ಶಾಲೆಗಳಲ್ಲಿ ಅನಧಿಕೃತವಾಗಿ ಎಲ್‌ಕೆಜಿ-ಯುಕೆಜಿ ಪ್ರಾರಂಭವಾಗಿರುವುದರಿಂದ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಲ್ಲದೆ ಅಂಗನವಾಡಿ ಕೇಂದ್ರಗಳು ಮುಚ್ಚುವ ಪರಿಸ್ಥಿತಿ ಬಂದಿರುವುದರಿಂದ ಕೂಡಲೇ ಎಲ್‌ಕೆಜಿ-ಯುಕೆಜಿಯನ್ನು ಸರ್ಕಾರಿ ಶಾಲೆಗಳ ಬದಲಾಗಿ ಅಂಗನವಾಡಿಗಳಲ್ಲಿ ಆರಂಭಿಸಬೇಕು ಎಂದು ಒತ್ತಾಯಿಸಿದರು.
ಐಸಿಡಿಎಸ್‌ ಯೋಜನೆಯಡಿಯಲ್ಲಿ ಅತ್ಯಂತ ಕಡಿಮೆ ಸವಲತ್ತುಗಳಿಗೆ ದಿನಕ್ಕೆ 6-30 ಗಂಟೆಯ ಕೆಲಸದೊಟ್ಟಿಗೆ ಇಲಾಖೆಯ ಎಲ್ಲಾ ತರಹದ ಕೆಲಸಗಳೊಟ್ಟಿಗೆ ಚುನಾವನಾ ಕೆಲಸಗಳು, ಭಾಗ್ಯಲಕ್ಷ್ಮೀ, ಸ್ತ್ರೀಶಕ್ತಿ, ಅಂಗವಿಕಲರಿಗೆ ಸಂಬಂಧಿಸಿದ ಕೆಲಸಗಳು ಕೆಲವೆಡೆ ಶೌಚಾಲಯಗಳನ್ನು ಕಟ್ಟಿಸಲು ಕೂಡಾ ಬಳಸುತ್ತಿರುವುದು ಹೊಸದೇನಲ್ಲ. ಇಷ್ಟೆಲ್ಲಾ ಕೆಲಸಗಳೊಟ್ಟಿಗೆ ರಾಜ್ಯ ಸರ್ಕಾರ ಹೊಸದಾಗಿ ಪ್ರಕಟಿಸಿದ ಮಾತೃಪೂರ್ಣ ಯೋಜನೆಯನ್ನು ಜಾರಿಗೊಳಿಸಲು ಕೆಲಸ ಮಾಡುತ್ತಿದ್ದಾರೆ. ಇಷ್ಟೆಲ್ಲಾ ಕೆಲಸಗಳನ್ನು ನಡೆಸುವಾಗಸಣ್ಣ ಪುಟ್ಟ ತಪ್ಪುಗಳಾದರೆ ಅವರನ್ನು ಅವಮಾನಿಸುವ, ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಗಳೂ ಹೆಚ್ಚಾಗುತ್ತಿರುವುದನ್ನು ವಿರೋಧಿಸಿ ರಾಜ್ಯಾದ್ಯಂತ ಜುಲೈ ಹತ್ತರಂದು ಅಂಗನವಾಡಿ ನೌಕರರು ಜಿಲ್ಲಾಧಿಕಾರಿಗಳ ಕಛೇರಿ ಚಲೋ ನಡೆಸುವ ಮೂಲಕ ಅಂಗನವಾಡಿ ನೌಕರರ ಬೇಡಿಕೆಗಳನ್ನು ಈಡೇರಸಬೇಕೆಂದು ಒತ್ತಾಯಿಸಿದರು.
ಮಹಾಂತೇಶ ಎಲಿ ಮಾತನಾಡಿ, ಮಿನಿ ಅಂಗನವಾಡಿ ಎಲ್ಲಾ ಕೇಂದ್ರಗಳಿಗೂ ಸಹಾಯಕಿಯರನ್ನು ಕಡ್ಡಾಯವಾಗಿ ನೇಮಕ ಮಾಡಬೇಕು. ಎಲ್ಲ ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಡುವಷ್ಟು ಸಂಭಾವನೆಯನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಡಬೇಕು. ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಹೆರಿಗೆ ರಜೆ, ಕಾಯಿಲೆಗಳು ಬಂದಾಗ ಪರ್ಯಾಯ ವ್ಯವಸ್ಥೆ ಮಾಡಬೇಕು, ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೂ ವರ್ಗಾವಣೆ, ಮುಂಬಡ್ತಿ ಬೇಕು, ಸೇವಾ ಜೇಷ್ಠತೆಯ ಆಧಾರದಲ್ಲಿ ಕನಿಷ್ಠ ವೇತನ ಜಾರಿ ಮಾಡಬೇಕು, 45ಎಲ್‌ಐಸಿಯ ಶಿಫಾರಸ್ಸಿನ ಪ್ರಕಾರ 18 ಸಾವಿರ ಕನಿಷ್ಠ ವೇತನ ಜಾರಿ ಮಾಡಬೇಕು. ದಿನಕ್ಕೆ 6-30 ಗಂಟೆ ಕೆಲಸ ಮಾತೃಪೂರ್ಣ ಮುಂತಾದ ಕೆಲಸದ ಹೊರೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗೌರವ ಧನ ಹೆಚ್ಚಳವಾಗಬೇಕು ಮತ್ತು ಸೇವಾ ಜೇಷ್ಠತೆಯ ಆಧಾರದಲ್ಲಿ ವೇತನವನ್ನಯು ನಿಗದಿಪಡಿಸಬೇಕು ಎಂದರು.
ಬ್ಯಾಡಗಿ ತಾಲೂಕು ಮುಖಂಡರಾದ ಹೇಮಾ ಆಸಾದಿ ಮಾತನಾಡಿ, ಅಂಗನವಾಡಿ ಸಹಾಯಕಿ ಕಾರ್ಯಕರ್ತೆಯಾಗಿ ಮುಂಬಡ್ತುಇ ಪಡೆಯಲು ಇರುವ ವಯಸ್ಸಿನ ಭೌಗೋಳಿಕ ವಿಸ್ತಿರ್ಣದ ಮಿತಿ ಸಡಿಲಿಸಬೇಕು. ಅನುಕಂಪದ ಆಧಾರದಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಮದುವೆಯಾಗದ ಹೆಣ್ಣುಮಕ್ಕಳಿಗೆ ಎಂಬ ಷರತ್ತನ್ನು ತೆಗೆದು ಕುಟುಂಬದವರಿಗೆ ಎಂದು ತಿದ್ದುಪಡಿಯಾಗಬೇಕು. ಹೊಸ ನಿವೃತ್ತಿ ಯೋಜನೆಯಲ್ಲಿ ಸದಸ್ಯರಿಗೆ ಇದುವರೆಗೂ ಪ್ಯಾನ್‌ ಕಾರ್ಡ ಕೊಟ್ಟಿಲ್ಲ, ನಿವೃತ್ತಿ ಹೊಂದಿ 5-6 ತಿಂಗಲಾದರೂ ನಿವೃತ್ತಿ ಸೌಲಭ್ಯ ಸಿಗುವುದಿಲ್ಲ. ಕೂಡಲೇ ಕ್ರಮವಹಿಸಬೇಕು. ಕಾಲಿ ಇರುವ ಸಹಾಯಕಿ ಮತರ್ತು ಕಾರ್ಯಕರ್ತೆಯರ ಹುದ್ದೆಗಳನ್ನು ತುಂಬಬೇಕು, ಹಲವು ಯೋಜನೆಗಳಿಗೆ ಡಿಡಿ, ಡಿಓ, ಸಿಡಿಪಿಓ, ಮೇಲ್ವಿಚಾರಿಕಿಯರನ್ನು ಖಾಯಂ ಆಗಿ ನೇಮಕ ಮಾಡಬೇಕು, ಅಂಗನವಾಡಿ ಕಾರ್ಯಕರ್ತೆಯರಿಗೆ ಸೇವಾ ನಿಯಮಾವಳಿ ರಚಿಸಬೇಕು, ಕೇಂದ್ರ ಸರ್ಕಾರ ಕಡಿತ ಮಾಡಿರುವ ಅನುದಾನ ವಾಪಾಸಾಗಬೇಕು, ಅಂಗನವಾಡಿ ಕೇಂದ್ರದ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಯನ್ನು ಸೂಚನೆಯನ್ನು ರಾಜ್ಯ ಸರ್ಕಾರ ಒಪ್ಪಬಾರದು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ, ಹೇಮಾವತಿ ಎಲಿ, ವಿನೋದಾ ಪಾಟೀಲ ರತ್ನಾ ಕಲ್ಕಣಿ, ಶಶಿಕಲಾ ಪಿ, ಲೀಲಾವತಿ ಸಾತಣ್ಣವರ, ಮಮತಾ ಯತ್ನಳ್ಳಿ, ಗೌರಮ್ಮ ನಾಯಕ್‌ ಮುಂತಾದವರಿದ್ದರು.

loading...