ಶೀರೂರು ಲಕ್ಷ್ಮೀವರ ತೀರ್ಥ ಶ್ರೀಗಳು ನಿಧನ

0
13
loading...

ಉಡುಪಿ: ಅತೀವ ಅನಾರೋಗ್ಯದಿಂದ ಬಳಲುತ್ತಿದ್ದ ಅಷ್ಠಮಠಾಧೀಶರಲ್ಲೊಬ್ಬರಾದ ಶೀರೂರು ಲಕ್ಷ್ಮೀವರ ತೀರ್ಥ ಶ್ರೀಗಳು ನಿಧನರಾಗಿದ್ದಾರೆ.

ತೀವ್ರ ಅಸ್ವಸ್ಥರಾಗಿದ್ದ ಶ್ರೀಗಳನ್ನು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ನಿನ್ನೆ ಫುಡ್ ಪಾಯಿಸನ್ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿಗೆ ದಾಖಲಾಸಲಾಗಿತ್ತು.ಅವರನ್ನು ವೆಂಟಿಲೇಟರ್​ನಲ್ಲಿ ಇಡಲಾಗಿತ್ತು. ಕಳೆದ ಕೆಲ ತಿಂಗಳುಗಳಿಂದ ಶ್ರೀಗಳಿಗೆ ಆಗಾಗ ಆರೋಗ್ಯ ಸಮಸ್ಯೆ ಎದುರಾಗುತ್ತಲೇ ಇತ್ತು. ಈ ಹಿಂದೆ ಥೈರಾಯ್ಡ್ ಸಮಸ್ಯೆ ಇದ್ದಿದ್ದರಿಂದ ಶೀರೂರು ಶ್ರೀಗಳಿಗೆ ಶಶ್ತ್ರ ಚಿಕಿತ್ಸೆ ನಡೆಸಲಾಗಿತ್ತು. ನಂತರದ ದಿನಗಳಲ್ಲಿ ಪದೇ ಪದೇ ಆಸ್ಪತ್ರೆಗಳಿಗೆ ಚೆಕಪ್​ಗೆ ತೆರಳುತ್ತಿದ್ದ ಶ್ರೀಗಳು, ಒಮ್ಮೆ ಗುಣಮುಖರಾದ್ರೆ ಮತ್ತೊಮ್ಮೆ ಅನಾರೋಗ್ಯಕ್ಕೆ ಈಡಾಗುತ್ತಲೇ ಇದ್ದರು.

loading...