ಶೋಭಾ ಕರಂದ್ಲಾಜೆ ಟಿಕೆಟ್ ಇಲ್ಲ?

0
14
loading...

ಬೆಂಗಳೂರು: ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ಚಿಕ್ಕಮಗಳೂರು-ಉಡುಪಿ ಲೋಕಸಭಾ ವ್ಯಾಪ್ತಿಯ ಬಿಜೆಪಿ ನಾಯಕರಲ್ಲಿ ಅಸಮಾಧಾನ ಮೂಡಿದೆ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆಗೆ ಟಿಕೇಟ್ ನೀಡದೇ ಚಿಕ್ಕಮಗಳೂರು ಬಿಜೆಪಿ ಜಿಲ್ಲಾಧ್ಯಕ್ಷ
ಡಿ.ಎನ್.ಜೀವರಾಜ್ ಟಿಕೆಟ್ ನೀಡುವ ಬಗ್ಗೆ ಇಂದು ನಡೆದ ಸಭೆಯಲ್ಲಿ ಚರ್ಚೆ ನಡೆದಿದೆ.
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ನೇತೃತ್ವದಲ್ಲಿ ಇಂದು ಚಿಕ್ಕಮಗಳೂರಿನ ಬಿಜೆಪಿ ಕಚೇರಿಯಲ್ಲಿ ಸಭೆ ನಡೆದಿದ್ದು,ಈ ಸಭೆಗೆ ಸಂಸದೆ ಶೋಭಾ ಕರಂದ್ಲಾಜೆ ಗೈರಾಗಿದ್ದು, ಇದು ಪಕ್ಷದಲ್ಲಿನ ಭಿನ್ನಮತವನ್ನು ಜನತೆಗೆ ಮುಂದೆ ಕಾಣಿಸಿಕೊಳ್ಳುವಂತೆ ಮಾಡಿದೆ.
ಈ ಹಿನ್ನಲೆಯಲ್ಲಿ ಶೋಭಾ ಕರಂದ್ಲಾಜೆಗೆ ಟಿಕೇಟ್ ಕೈ ತಪ್ಪಿ ಜಿಲ್ಲಾಧ್ಯಕ್ಷ ಡಿ.ಎನ್.ಜೀವರಾಜ್‍ಗೆ ಟಿಕೇಟ್ ನೀಡುವ ಕುರಿತು ಚರ್ಚೆ ನಡೆಯಲಿದೆ.

loading...