ಸವಿತಾ ಮಹರ್ಷಿ ಜಯಂತಿ ಆಚರಿಸುವಂತೆ ಮನವಿ

0
17
loading...

ಕನ್ನಡಮ್ಮ ಸುದ್ದಿ-ಶಿರಸಿ: ರಾಜ್ಯ ಸರ್ಕಾರದ ವತಿಯಿಂದ ಹಡಪದ ಅಪ್ಪಣ್ಣ ಜಯಂತಿ ಬದಲಾಗಿ ಸವಿತಾ ಮಹರ್ಷಿ ಜಯಂತಿ ಆಚರಿಸುವಂತೆ ಒತ್ತಾಯಿಸಿ ನಗರದ ಸವಿತಾ ಸಮಾಜ ಸಂಘದ ಪದಾಧಿಕಾರಿಗಳು ಉಪವಿಭಾಗಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಬುಧವಾರ ಉಪವಿಭಾಗಾಧಿಕಾರಿ ರಾಜು ಮೊಗವೀರ ಅವರಿಗೆ ಮನವಿ ಸಲ್ಲಿಸಿದ ಸಂಘದ ಪದಾಧಿಕಾರಿಗಳು, ರಥ ಸಪ್ತಮಿಯಂದು ಸವಿತಾ ಸಮಾಜದವರು ಕುಲಗುರುವಾದ ಸವಿತಾ ಮಹರ್ಷಿಗಳ ಜಯಂತಿಯನ್ನು ಖಾಸಗಿಯಾಗಿ ಆಚರಿಸುತ್ತಿದ್ದೇವೆ. ಈ ಜಯಂತಿಯನ್ನು ಸರ್ಕಾರಿ ಜಯಂತಿಯಾಗಿ ಆಚರಿಸುವಂತೆ ಸಾಕಷ್ಟು ಬಾರಿ ಮನವಿ ಮಾಡಿದರೂ ಸರ್ಕಾರ ಈವರೆಗೂ ಸ್ಪಂದಿಸಿಲ್ಲ. ಆದರೆ ಇದೀಗ ಸವಿತಾ ಸಮಾಜದ ಉಪ ಜಾತಿಯಾದ ಹಡಪದ ಸಮಾಜದವರನ್ನು ಓಲೈಸಿಕೊಳ್ಳಲು ಹಡಪದ ಅಪ್ಪಣ್ಣ ಜಯಂತಿ ಆಚರಣೆಗೆ ಆದೇಶಿಸಿದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಹಡಪದ ಜಾತಿಯವರು ಇಲ್ಲದ ಕಾರಣ ಸವಿತಾ ಸಮಾಜದ ಉಪಜಾತಿಯಾದ ಹಡಪದ ಅಪ್ಪಣ್ಣ ಅವರ ಜಯಂತಿ ಆಚರಣೆಗೆ ತೊಡಕಾಗಿದೆ. ಈ ಹಿನ್ನೆಲೆಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಬದಲಾಗಿ ಸವಿತಾ ಮಹರ್ಷಿ ಜಯಂತಿ ಆಚರಿಸುವಂತೆ ಸರ್ಕಾರ ಆದೇಶಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ಸಂಘಟನೆಯ ತಾಲೂಕಾ ಅಧ್ಯಕ್ಷ ಗೋಪಾಲ ಕೋಂಕಲ್‌ ಹಾಗೂ ಇತರರು ಇದ್ದರು.

loading...