ಸಿರಿಧಾನ್ಯಗಳಿಗೆ ಪೂರಕ ಮಾರುಕಟ್ಟೆ ಅಗತ್ಯ : ವೀಣಾ

0
9
loading...

ಬಾಗಲಕೋಟೆ: ಜಿಲ್ಲೆಯಲ್ಲಿ ಬೆಳೆಯಲಾಗುತ್ತಿರುವ ಸಿರಿದಾನ್ಯಗಳನ್ನು ದಲ್ಲಾಳಿಗಳು ಸಂಸ್ಕರಿಸಿ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರುತ್ತಿರುವದರಿಂದ ರೈತರು ಆರ್ಥಿಕವಾಗಿ ಹಿಂದೆ ಉಳಿದಿದ್ದು, ಅದಕ್ಕಾಗಿ ಸಿರಿಧಾನ್ಯಕ್ಕೆ ಪೂರಕ ಮಾರುಕಟ್ಟೆ ಒದಗಿಸುವುದು ಅಗತ್ಯವಾಗಿದೆ ಎಂದು ಜಿ.ಪಂ ಅಧ್ಯಕ್ಷೆ ವೀಣಾ ಕಾಶಪ್ಪವನರ ಹೇಳಿದರು.
ನವನಗರದ ಕಾಳಿದಾಸ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕೃಷಿ, ತೋಟಗಾರಿಕೆ, ಜಿಲ್ಲಾ ಪ್ರಾಂತೀಯ ಸಹಕಾರ ಸಾವಯವ ಕೃಷಿಕರ ಸಂಘಗಳ ಒಕ್ಕೂಟ, ತೋವಿವಿ ಹಾಗೂ ಇತರೆ ಸಂಸ್ಥೆಗಳ ಸಹಯೋಗದಲ್ಲಿ ಆತ್ಮ ಯೋಜನೆಯಡಿ ಹಮ್ಮಿಕೊಂಡ ಸಾವಯವ ಸಿರಿಧಾನ್ಯ ಹಾಗೂ ಸಿರಿಫಲ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜನರ ಆರೋಗ್ಯದ ದೃಷ್ಠಿಯಿಂದ ಸಿರಿಧಾನ್ಯಗಳ ಮಹತ್ವವನ್ನು ತಿಳಿಸುವ ನಿಟ್ಟಿನಲ್ಲಿ ಹಾಗೂ ರೈತರ ಆರ್ಥಿಕವಾಗಿ ಸಬಲಗೊಳ್ಳುವಂತೆ ಮಾಡಲು ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಹಳೆಯ ಪರಂಪರೆಗಳಾದ ಕುಟ್ಟುವುದು, ಬೀಸುವುದರ ಜೊತೆಗೆ ಸಿರಿಧಾನ್ಯಗಳು ಸಹ ನಶಿಸಿ ಹೋಗುತ್ತಿದ್ದು, ಅಂತಹ ಪರಂಪರೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಅಲ್ಲಲ್ಲಿ ಕಾಣುತ್ತಿದ್ದೆÃವೆ. ಇಂದಿನ ಯುಗದಲ್ಲಿ ಸಿರಿಧಾನ್ಯಗಳಿಗೆ ಹೆಚ್ಚಿನ ಆಧ್ಯತೆ ನೀಡುತ್ತಿದ್ದರೂ ಮಾರುಕಟ್ಟೆಯಲ್ಲಿ ಅದಕ್ಕೆ ಸೂಕ್ತ ಬೆಳೆ ದೊರೆಯದಿರುವುದು ವಿಷಾಧನೀಯ ಸಂಗತಿಯಾಗಿದೆ ಎಂದರು.
ರೈತರಿಂದ ಪಡೆದುಕೊಂಡು ಸಿರಿಧಾನ್ಯಗಳನ್ನು ಸಂಸ್ಕರಿಸಿ ಪ್ಯಾಕೇಟ್ ಮಾಡಿ ಸಂಸ್ಥೆಯ ಲೇಬಲ್ ಅಂಟಿಸಿ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇದರಿಂದ ರೈತರು ಆರ್ಥಿಕವಾಗಿ ಮುಂದೆ ಬರಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಸರಕಾರದ ಗಮನಕ್ಕೆ ತಂದು ಒಂದು ಕಂಪನಿ ಜೊತೆಗೆ ಟಯಾಪ ಮಾಡಿಕೊಂಡು ಬಾಗಲಕೋಟೆಯಲ್ಲಿಯೇ ಒಂದು ಪ್ರೊÃಸೆಸ್ ಯೂನಿಟ್ ಪ್ರಾರಂಭಿಸುವ ಕಾರ್ಯ ಮಾಡಲು ಶ್ರಮಿಸುವುದಾಗಿ ತಿಳಿಸಿದರು.

ವಿಧಾನ ಪರಿಷತ್ ಸದಸ್ಯರಾದ ಹನಮಂತ ನಿರಾಣಿ, ತಾ.ಪಂ ಅದ್ಯಕ್ಷ ಚನ್ನನಗೌಡರ ಪರನಗೌಡ ಮಾತನಾಡಿದರು. ಇದೇ ಸಂದರ್ಭದಲ್ಲಿ ಸಿರಿಧಾನ್ಯಗಳ ಬಿತ್ತಿಪತ್ರಗಳನ್ನು ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಜಿ.ಪಂ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ನಗರಸಭೆ ಅಧ್ಯಕ್ಷ ದ್ಯಾವಪ್ಪ ರಾಕುಂಪಿ, ಜಿ.ಪಂ ಸದಸ್ಯರಾದ ಮಾಂತೇಶ ಉದಪುಡಿ, ಬಾಯಕ್ಕ ಮೇಟಿ, ಶಶಿಕಲಾ ಯಡಹಳ್ಳಿ, ಹನಮವ್ವ ಕರೆಹೊಳಿ, ಶೋಭಾ ಬಿರಾದಾರ, ಜಿ.ಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ತೋವಿವಿಯ ವಿಸ್ತರಣಾಧಿಕಾರಿ ವಾಯ್.ಕೆ.ಕೋಟಿಕಲ್, ಕೃಷಿ ಜಂಟಿ ನಿರ್ದೇಶಕ ರಮೇಶಕುಮಾರ, ಕೃಷಿ ಇಲಾಖೆಯ ಉಪನಿರ್ದೇಶಕ ಕೊಂಗವಾಡ, ತೋಟಗಾರಿಕೆ ಉಪನಿರ್ದೇಶಕ ರವೀಂದ್ರ ಹಕಾಟೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

loading...