ಸುನಂದಾ ಪ್ರಕರಣ: ಶಶಿ ತರೂರ್’ಗೆ ಜಾಮೀನು

0
7
loading...

ನವದೆಹಲಿ: ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಶಶಿ ತರೂರ್‍ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಪತ್ನಿ ಸುನಂದಾ ಸಾವು ಪ್ರಕರಣದ ಕುರಿತು ಸಂಸದ ಶಶಿ ತರೂರ್‍ಗೆ ಈಗಾಗಲೇ ಈ ಪ್ರಕರಣದಲ್ಲಿ ಜೂ.5ರಂದು ಸಮನ್ಸ್ ಜಾರಿಗೊಳಿಸಿರುವ ನ್ಯಾಯಾಲಯ ಶನಿವಾರ (ಇಂದು) ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿತ್ತು. ಈ ಪ್ರಕರಣದ ಸಂಬಂಧ ನಿರೀಕ್ಷಣಾ ಜಾಮೀನು ನೀಡುವಂತೆ ಶಶಿ ತರೂರ್ ಕೋರ್ಟ್ ಮೆಟ್ಟಿಲೇರಿದ್ದರು.
ಕೋರ್ಟ್ ಸೂಚನೆಯಂತೆ ಮಾಜಿ ಸಚಿವ ತರೂರ್ ಇಂದು ವಿಚಾರಣೆಗೆ ಹಾಜರಾಗಿದ್ದರು. ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಒಂದು ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಕ್ರಮಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

loading...