ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯ

0
8
loading...


ಕನ್ನಡಮ್ಮ ಸುದ್ದಿ

ಚಿಕ್ಕೋಡಿ 19: ಹೆಚ್ಚುವರಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸುವ ಜತೆಗೆ ತಡೆರಹಿತ ಬಸ್ ನಿಡುಗಡೆಗೆ ಒತ್ತಾಯಿಸಿ ಗುರುವಾರ ತಾಲೂಕಿನ ನಣದಿವಾಡಿ ಕ್ರಾಸ್‍ದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಸರಿಯಾದ ಸೌಲಭ್ಯವಿಲ್ಲದ ಕಾರಣ ನಣದಿವಾಡಿ ಗ್ರಾಮದಿಂದ ಬೇರೆ ಬೇರೆ ಊರುಗಳಿಗೆ ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ತೀವೃ ತೊಂದರೆಯಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ನಣದಿವಾಡಿ ಗ್ರಾಮಕ್ಕೆ ಸೂಕ್ತ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಿಕೊಡುವಂತೆ ಆಗೃಹಿಸಿದರು. ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಚಿಕ್ಕೋಡಿಯಿಂದ ನಣದಿವಾಡಿಗೆ ಹೆಚ್ಚುವರಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಆಕ್ರೋಶ ವ್ಯಕ್ತ ಪಡಿಸಿದರು.

ಪ್ರತಿ ದಿನ ಬೆಳಗ್ಗೆ 7 ಗಂಟೆಯಿಂದ 10 ಗಂಟೆವರೆಗೆ ಮತ್ತು ಸಂಜೆ 4 ಗಂಟೆಯಿಂದ 6-30ರವರೆಗೆ ಹೆಚ್ಚುವರಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸುವ ಮುಖಾಂತರ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಹೋಗಿ ಬರಲು ಅನುಕೂಲ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

loading...