ಅಕ್ರಮ ಮರಳು ಸಾಗಿಸುತ್ತಿದ್ದ ಲಾರಿಗಳ ಮೇಲೆ ಪೋಲಿಸರ ದಾಳಿ

0
33
loading...

ಅಕ್ರಮ ಮರಳು ಸಾಗಿಸುತ್ತಿದ್ದ ಲಾರಿಗಳ ಮೇಲೆ ಪೋಲಿಸರ ದಾಳಿ

ಕನ್ನಡಮ್ಮ ಸುದ್ದಿ
ಬೆಳಗಾವಿ

ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಆರು ಲಾರಿಗಳ ಮೇಲೆ ನಗರ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ದಾಳಿ ನಡೆಸಿ ಲಾರಿಗಳನ್ನು ವಶಪಡಿಸಿಕೊಂಡ ಘಟನೆ ಶನಿವಾರ ನಡೆದಿದೆ.

ಅಕ್ರಮವಾಗಿ ಆರು ಲಾರಿಗಳಲ್ಲಿ ಮರಳನ್ನು ತುಂಬಿಕೊಂಡು ಸಾಗಾಟ ಮಾಡುವುದರ ಖಚಿತ ಮಾಹಿತಿಯಾದಾರದ ಮೇಲೆ ನಗರ ಪೊಲೀಸ್ ಆಯುಕ್ತ ಡಾ.ಡಿ.ಸಿ.ರಾಜಪ್ಪ ಮಾರ್ಗದರ್ಶನದಲ್ಲಿ ಪೊಲೀಸರು ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loading...