ಅಭಿವೃದ್ಧಿ ಕಾರ್ಯಗಳಿಗೆ ಬಿಜೆಪಿ ಸಹಕಾರ ಬೇಕು: ಸಚಿವ ದೇಶಪಾಂಡೆ

0
2
loading...

ಕನ್ನಡಮ್ಮ ಸುದ್ದಿ-ಹುಬ್ಬಳ್ಳಿ: ಅಭಿವೃದ್ದಿ ಕಾರ್ಯಗಳಿಗೆ ಬಿಜೆಪಿಯವರ ಸಹಕಾರವೂ ಬೇಕು. ಎಲ್ಲರ ಸಹಕಾರದಿಂದ ಮಾತ್ರ ಅಭಿವೃದ್ಧಿ ಸಾಧ್ಯಎಂದು ರಾಜ್ಯ ಕಂದಾಯ ಸಚಿವ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಇನ್ನೂ ಅಭಿವೃದ್ಧಿಯಾಗಬೇಕಿದೆ ಎಂಬುದು ನನಗೆ ಗೊತ್ತಿದೆ ಎಂದು ನುಡಿದರು. ಪ್ರತ್ಯೇಕ ರಾಜ್ಯವನ್ನು ಕೇಳುವವರು ಯಾರು ಎಂದು ಪ್ರಶ್ನಿಸಿದ ಅವರು, ಇದು ಅಖಂಡ ಕರ್ನಾಟಕವಲ್ಲ, ಪ್ರಗತಿಪರ ಕರ್ನಾಟಕ ಎಂದು ಹೇಳಿದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ 115 ಕೋಟಿ ರೂ. ಬಾಕಿ ಹಣ ಸರಕಾರದಿಂದ ಬರಬೇಕೆನ್ನಲಾಗುತ್ತಿದ್ದು, ಇದಿನ್ನೂ ತಮ್ಮ ಗಮನಕ್ಕೆ ಬಂದಿಲ್ಲ. ಬಂದ ನಂತರ ಪರಿಶೀಲಿಸುವುದಾಗಿ ಅವರು ಹೇಳಿದರು. ಕುಡಿಯುವ ನೀರಿಗಾಗಿ ಇಲ್ಲಿಗೆ 24 ಕೋಟಿ ರೂ. ಹಣ ಬಿಡುಗಡೆ ಮಾಡಬೇಕಿದ್ದು, ಅದನ್ನು ತಕ್ಷಣವೇ ಬಿಡುಗಡೆ ಮಾಡಿಸುತ್ತೇನೆ ಎಂದು ಸಚಿವರು ಹೇಳಿದರು. ಧಾರವಾಡ ಒಳ್ಳೆಯಜಿಲ್ಲೆ. ಇಲ್ಲಿ ಸಾಕಷ್ಟು ಪ್ರಗತಿಪರ ಜನರಿದ್ದಾರೆ. ಈ ಜಿಲ್ಲೆ ಇನ್ನು ಸಾಕಷ್ಟು ಅಭಿವೃದ್ಧಿಯಾಗಬೇಕಿದೆ ಎಂದು ಅವರು ಹೇಳಿದರು.

loading...