ಅ.12ರಂದು ನೂತನ ನ್ಯಾಯಾಲಯದ ಸಂಕೀರ್ಣ ಉದ್ಘಾಟನೆ

0
6
loading...

ಕನ್ನಡಮ್ಮ ಸುದ್ದಿ-ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ನೂತನ ನ್ಯಾಯಾಲಯದ ಸಂಕೀರ್ಣದ ಉದ್ಘಾಟನಾ ಕಾರ್ಯಕ್ರಮ ಅ. 12 ರಂದು ನಡೆಯಲಿದ್ದು, ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ,ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ ಮಾಹೇಶ್ವರಿ ಸೇರಿದಂತೆ ಅನೇಕ ಗಣ್ಯ ಅತಿಥಿಗಳು ಆಗಮಿಸಲಿದ್ದಾರೆ ಎಂದು ಹೈಕೋರ್ಟ್‍ನ ನ್ಯಾಯಮೂರ್ತಿ ರಾಘವೇಂದ್ರ ಚವ್ಹಾಣ ಹೇಳಿದರು.
ಇಲ್ಲಿನ ಡಾ.ಡಿ.ಎಸ್.ಕರ್ಕಿ ಕನ್ನಡ ಭವನದÀ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕನ್ನಡಿಗರ ಸಂಸ್ಕೃತಿ, ಶಿಸ್ತು, ಆಚರಣೆಗಳನ್ನು ಪ್ರತಿಬಿಂಬಿಸುವಂತೆ ಈ ಕಾರ್ಯಕ್ರಮ ಆಯೋಜಿಸಬೇಕು. ಧಾರವಾಡ ಜಿಲ್ಲೆಯು ನಾಡಿನ ಪ್ರಮಖ ಸಾಂಸ್ಕೃತಿಕ ಕೇಂದ್ರವಾಗಿ ಗುರುತಿಸಿಕೊಂಡಿದೆ. ಈ ಹಿರಿಮೆಯನ್ನು ಎತ್ತಿ ಹಿಡಿಯುವಂತೆ ಈ ಚಾರಿತ್ರಿಕ ಕಾರ್ಯಕ್ರಮವನ್ನಾಗಿಸಿ ಯಶಸ್ವಿಯಾಗಬೇಕು ಎಂದರು.
ಜಿಲ್ಲಾಧಿಕಾರಿ ಎಂ. ದೀಪಾ ಮಾತನಾಡಿ, ಜಿಲ್ಲಾಡಳಿತ ಈಗಾಗಲೇ ಹತ್ತು ಹಲವು ಮಹತ್ವದ ಕಾರ್ಯಕ್ರಮಗಳನ್ನು ನಿರ್ವಹಿಸಿದ ಅನುಭವ ಹೊಂದಿದೆ. ಆದರೆ ಈ ಬಾರಿ ದೇಶದ ನ್ಯಾಯಾಂಗದ ಅತ್ಯುನ್ನತ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವದರಿಂದ ಶಿಷ್ಠಾಚಾರ ಪಾಲನೆ ಭಿನ್ನವಾಗಿರುತ್ತದೆ. ಇದನ್ನು ಅಧಿಕಾರಿಗಳು ಅರಿತುಕೊಂಡು ಲೋಪಗಳಾಗದಂತೆ ಎಚ್ಚರವಹಿಸಬೇಕು ಎಂದು ತಿಳಿಸಿದರು.
ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ಆರ್.ಬಿ. ಬೂದಿಹಾಳ, ಹೈಕೋರ್ಟ ನ್ಯಾಯಮೂರ್ತಿ ಕೆ.ಎಸ್. ಮುದಗಲ್, ರಜಿಸ್ಟಾರ್ ಸಿ.ಎಂ.ಜೋಷಿ, ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಈಶಪ್ಪ ಭೂತೆ, ಡಿಸಿಪಿ ರೇಣುಕಾ ಸುಕುಮಾರ್, ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ಜಾವೇದ್ ಅಹ್ಮದ್, ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್ ಇದ್ದರು.

loading...