ಉ.ಕ. ಬಂದ್: ಜಿಲ್ಲೆಯಲ್ಲಿ ಎಂದಿನಂತೆ ಸಂಚಾರ

0
16
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ಅಭಿವೃದ್ಧಿಯಲ್ಲಿ ಹಿಂದೆ ಬಿದ್ದ ಹಾಗೂ ಎಲ್ಲ ಸರಕಾರಗಳು ಉತ್ತರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಉ.ಕ. ಹೋರಾಟ ಸಮಿತಿ ಕರೆ ನೀಡಿದ್ದ ಬಂದ್‍ಗೆ ಬೆಳಗಾವಿ ಜಿಲ್ಲೆಯಲ್ಲಿ ಬೆಂಬಲ ದೊರೆತಿಲ್ಲ.
ನಗರದಲ್ಲಿ ಎಂದಿನಂತೆ ಶಾಲಾ-ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಬಸ್ ಸಂಚಾರ ಕೂಡ ಎಂದಿನಂತಿವೆ. ಬೆಳಗಾವಿ ಧಾರವಾಡ ಸೇರಿದಂತೆ 12 ಜಿಲ್ಲೆಯಲ್ಲಿ ವಿವಿಧ ಸಂಘಟನೆಗಳು ಇಂದು ಬಂದ್‍ಗೆ ಕರೆ ನೀಡಿದ್ದವು.

loading...