ಉ.ಕ. ಬಂದ್: ಸಂಚಾರ ವ್ಯವಸ್ಥೆ ಸುಗಮ

0
6
loading...

ಕನ್ನಡಮ್ಮ ಸುದ್ದಿ-ಹುಬ್ಬಳ್ಳಿ: ಪ್ರತ್ಯೇಕ ಉತ್ತರ ಕರ್ನಾಟಕಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಬಂದ್‍ಗೆ ಜನಬೆಂಬಲ ವ್ಯಕ್ತವಾಗಿಲ್ಲ. ಎಲ್ಲ ಜಿಲ್ಲೆಗಳಲ್ಲೂ ಜನಜೀವನ ಸಾಮಾನ್ಯವಾಗಿದ್ದು, ಜನರು ಎಂದಿನಂತೆ ತಮ್ಮ ದೈನಂದಿನ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.
ಬಂದ್‍ಗೆ ಕರೆ ನೀಡಿದ್ದ ಸಂಘಟನೆಗಳ ನಡುವೆ ಸಹಮತ ಏರ್ಪಡದೆ ಹೋರಾಟಗಾರರೇ ಮೂರು ದಿಕ್ಕಿಗೆ ಹೊರಳಿದ್ದರಿಂದ ಬುಧವಾರವೇ ಬಂದ್ ಕರೆ ತನ್ನ ತೀವ್ರತೆ ಕಳೆದುಕೊಂಡಿದೆ. 13 ಜಿಲ್ಲೆಗಳಲ್ಲಿ ಹೊರಾಟ ನಡೆಸುವ ತೀರ್ಮಾನ ಬೆಂಬಲಿಸಿದ್ದ ಬಹುತೇಕ ಸಂಘಟನೆಗಳು ಬಂದ್‍ಗೆ ಬೆಂಬಲಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದವು. ಆ ಮೂಲಕ ನಮ್ಮ ಬೆಂಬಲ ಉತ್ತರ ಕರ್ನಾಟಕ ಅಭಿವೃದ್ಧಿ ಹೋರಾಟಕೇ ಹೊರತು ಪ್ರತ್ಯೇಕ ರಾಜ್ಯಕ್ಕಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಪ್ರಮುಖವಾಗಿ ಬಂದ್‍ಗೆ ಕರೆ ಕೊಟ್ಟಿದ್ದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಸೋಮಶೇಖರ ಕೋತಂಬರಿ ಸಿಎಂ ಭರವಸೆ ಹಿನ್ನೆಲೆಯಲ್ಲಿ ಬಂದ್ ಹಿಂಪಡೆದಿರುವುದಾಗಿ ಘೋಷಿಸಿದ್ದರು. ಆದರೆ ಉತ್ತರ ಕರ್ನಾಟಕದ ರೈತ ಸಂಘದ ಅಧ್ಯಕ್ಷ ಬಸವರಾಜ ಕರಿಗಾರ ಅವರು ಉತ್ತರ ಕರ್ನಾಟಕ ನಿರ್ಲಕ್ಷ್ಯ ಖಂಡಿಸಿ ಗುರುವಾರ ಬಂದ್ ಆಚರಿಸುವುದು ನಿಶ್ಚಿತ ಎಂದು ತಿಳಿಸಿದ್ದರು. ಆದರೆ ಗುರುವಾರ ಬೆಳಗ್ಗೆ ಉತ್ತರ ಕರ್ನಾಟಕ ಭಾಗದ ಎಲ್ಲಾ 13 ಜಿಲ್ಲೆಗಳಲ್ಲಿ ಬಂದ್‍ಗೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಕಂಡು ಬಂದ ಕಂಡು ಬಂದಿಲ್ಲ.

loading...