ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿಕ್ಕೆ

0
6
loading...

ವಿಜಯಪುರ: ವಿಧಾನ ಪರಿಷತ್ (ಸ್ಥಳೀಯ ಸಂಸ್ಥೆ ಕ್ಷೆÃತ್ರ) ಚುನಾವಣೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟದ ಅಧಿಕೃತ ಅಭ್ಯರ್ಥಿಯಾಗಿ ಸುನೀಲಗೌಡ ಪಾಟಲ ಹಾಗೂ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಗೂಳಪ್ಪ ಶೆಟಗಾರ ಸೋಮವಾರ ನಾಮಪತ್ರ ಸಲ್ಲಿಸಿದರು.
ಈ ಇಬ್ಬರು ಅಭ್ಯರ್ಥಿಗಳಿಗೂ ಅವರವರ ಪಕ್ಷದ ಅವಳಿ ಜಿಲ್ಲೆಯ ಹಿರಿಯ ನಾಯಕರು, ಶಾಸಕರು ಸಾಥ್ ನೀಡಿದರು. ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೂ ಮುನ್ನ ತಮ್ಮ ಅಪಾರ ಬೆಂಬಲಿಗರೊಂದಿಗೆ ಶ್ರಿÃ ಸಿದ್ದೆÃಶ್ವರ ದೇವಾಲಯಕ್ಕೆ ತೆರಳಿ ವೀಶೇಷ ಪೂಜೆ ಸಲ್ಲಿಸಿದರು.

ಬಿಜೆಪಿ ಅಭ್ಯರ್ಥಿಯಾಗಿ ಶೆಟಗಾರ ನಾಮಪತ್ರ ಸಲ್ಲಿಕೆ
ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಪಾಲಿಕೆ ಸದಸ್ಯ ಗೂಳಪ್ಪ ಶೆಟಗಾರ ಸೋಮವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ, ಮಾಜಿ ಸಚಿವ ಗೋವಿಂದ ಕಾರಜೋಳ, ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ, ಸಿದ್ದು ಸವದಿ, ರಮೇಶ ಭೂಸನೂರ, ಮುಖಂಡರಾದ ವಿಜಯಕುಮಾರ ಪಾಟೀಲ, ಚಂದ್ರಶೇಖರ ಕವಟಗಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸುನೀಲಗೌಡ ನಾಮಪತ್ರ ಸಲ್ಲಿಕೆ
ಕಾಂಗ್ರೆಸ್ ಅಭ್ಯರ್ಥಿಯಾಗಿ ಸುನೀಲಗೌಡ ಪಾಟೀಲ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬೆಂಬಲಿಸುವ ಹಿನ್ನೆಲೆಯಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಜಿ. ಪಾಟೀಲ ಹಲಸಂಗಿ ಜೆಡಿಎಸ್ ಟಿಕೇಟ್‌ಗಾಗಿ ಕೊನೆಕ್ಷಣದವರೆಗೂ ಪೈಪೋಟಿ ನಡೆಸಿದರಾದರೂ ಹೈಕಮಾಂಡ್ ದೋಸ್ತಿ ಅಭ್ಯರ್ಥಿಯಾಗಿ ಸುನೀಲಗೌಡ ಪಾಟೀಲರನ್ನೆÃ ಆಯ್ಕೆ ಮಾಡಲು ಒಪ್ಪಿತು.

ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ. ಮನಗೂಳಿ, ಮಾಜಿ ಸಚಿವರಾದ ಎಸ್.ಆರ್. ಪಾಟೀಲ, ಎಂ.ಬಿ. ಪಾಟೀಲ, ಉಮಾಶ್ರಿÃ, ಎಚ್.ವೈ. ಮೇಟಿ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ನಾಗಠಾಣ ಶಾಸಕ ಡಾ.ದೇವಾನಂದ ಚವ್ಹಾಣ, ಮಾಜಿ ಸಚಿವ ಸಿ.ಎಸ್. ನಾಡಗೌಡ, ಮಾಜಿ ಶಾಸಕ ಪ್ರೊ.ರಾಜು ಆಲಗೂರ, ಅಜಯಕುಮಾರ ಸರನಾಯಕ, ಎಸ್.ಜಿ. ನಂಜಯ್ಯನಮಠ ಮೊದಲಾವರು ಪಾಲ್ಗೊಂಡಿದ್ದರು.
ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ಭಾರತೀಯ ಜನತಾ ಪಕ್ಷದ ಅಧಿಕೃತ ಅಭ್ಯರ್ಥಿ ಗೂಳಪ್ಪ ಶೆಟಗಾರ ಅತ್ಯಧಿಕ ಮತಗಳಿಂದ ವಿಜಯಶಾಲಿಯಾಗಿ ದಾಖಲೆ ಬರೆಯಲಿದ್ದಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಎಂ.ಬಿ. ಪಾಟೀಲ, ಫಲಿತಾಂಶ ಬಂದ ಮೇಲೆ ಯಾರು ದಾಖಲೆ ಬರೆಯುತ್ತಾರೆ ನೋಡೋಣ ಎಂದು ಯತ್ನಾಳರಿಗೆ ಟಾಂಗ್ ನೀಡಿದರು.
ದಾಖಲೆ ಮತಗಳಿಂದ ಗೆಲ್ಲುತ್ತೆÃವೆ ಎಂದು ನಾವು ಯತ್ನಾಳರಂತೆ ಸ್ವಯಂ ಘೋಷಣೆ ಮಾಡುವುದಿಲ್ಲ. ಮತದಾರರ ಆಶೀರ್ವಾದ ನಮ್ಮ ಪಕ್ಷದ ಅಭ್ಯರ್ಥಿಯ ಮೇಲಿದೆ. ಹೀಗಾಗಿ ನಮ್ಮ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸುವುದು ನಿಶ್ಚಿತ ಎಂದರು.

loading...