ಕಾಂಗ್ರೆಸ್ ಮುಕ್ತ ರಾಜ್ಯ ನಿರ್ಮಾಣಕ್ಕೆ ಸಂಕಲ್ಪ ತೊಡಿ: ಡಾ.ವಿಶ್ವನಾಥ

0
6
loading...

ಕಾಂಗ್ರೆಸ್ ಮುಕ್ತ ರಾಜ್ಯ ನಿರ್ಮಾಣಕ್ಕೆ ಸಂಕಲ್ಪ ತೊಡಿ: ಡಾ.ವಿಶ್ವನಾಥ

ಕನ್ನಡಮ್ಮ ಸುದ್ದಿ-ಬೈಲಹೊಂಗಲ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಿಳಿಸುವದರ ಮೂಲಕ ಸ್ಥಳೀಯ ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವ ಮೂಲಕ ಕಾಂಗ್ರೆಸ್ ಮುಕ್ತ ರಾಜ್ಯ ನಿರ್ಮಾಣಕ್ಕೆ ಸಂಕಲ್ಪ ತೊಡಬೇಕು ಎಂದು ರಾಜ್ಯ ವಿಧಾನಸಭೆ ವಿರೋಧ ಪಕ್ಷ ನಾಯಕ ಜಗದೀಶ ಶೆಟ್ಟರ ಹೇಳಿದರು. ಪಟ್ಟಣದ ಪುರಸಭೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಸೋಮವಾರ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದು ಪ್ರತಿಯೊಂದು ಜನಾಗಂದವರ ಸಮಗ್ರ ಅಭಿವೃದ್ಧಿಗೆ ಯೋಜನೆ ಜಾರಿಗೊಳೀಸಲಾಗಿತ್ತು. ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವಿಶ್ವನಾಥ ಪಾಟೀಲ ತಮ್ಮ ಅಧಿಕಾರ ಅವಧಿಯಲ್ಲಿ ಮತಕ್ಷೆÃತ್ರ, ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಕೊಡುಗೆ ನೀಡಿದ್ದಾರೆ. ಅವುಗಳೆಲ್ಲವನ್ನು ಗಮನದಲ್ಲಿಟ್ಟುಕೊಂಡು ಬೈಲಹೊಂಗಲ ಪಟ್ಟಣ ಜನತೆ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಬೇಕು.. ಪುರಸಭೆ ಅಧಿಕಾರದ ಚುಕ್ಕಾಣಿ ಹಿಡಿಯಲು ನೆರವಾಗಬೇಕು ಎಂದು ಕೇಳಿಕೊಂಡರು.
ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ ಮಾತನಾಡಿ, ಪುರಸಭೆ ೨೭ ವಾರ್ಡಿಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಚುನಾವಣಾ ಕಣಕ್ಕೆ ಇಳಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಗೆ ಮತದಾರ ಬಾಂಧವರು ಅಮೂಲ್ಯ ಮತ ನೀಡಿ ಅವರಿಗೆ ತಮ್ಮ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡಬೇಕು. ಇದರಿಂದ ಸ್ಥಳೀಯ ಆಡಳಿತವನ್ನು ಕಾಂಗ್ರೆಸ್ ಮುಕ್ತವಾಗಿಸಿ ಬಿಜೆಪಿ ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದರು. ಬಿಜೆಪಿ ಮಂಡಲ ಅಧ್ಯಕ್ಷ ಮಡಿವಾಳಪ್ಪ ಹೋಟಿ, ಮುರುಗೇಶ ಗುಂಡ್ಲೂರ, ಬಿಜೆಪಿ ಅಭ್ಯರ್ಥಿಗಳಾದ ಉದಯ ಕೋಳೆಕರ, ಜಗದೀಶ ಬೋರಕನವರ, ಸುಧೀರ ವಾಲಿ, ರತ್ನವ್ವಾ ಗೋಧಿ, ಬಸವರಾಜ ಶಿಂತ್ರಿ, ಉಮಾ ಹೊಸೂರ ಸೇರಿದಂತೆ ೨೭ ವಾರ್ಡಿನ ಬಿಜೆಪಿ ಅಭ್ಯರ್ಥಿಗಳು, ರುದ್ರಪ್ಪ ಹೊಸಮನಿ, ಬಿ.ಬಿ.ಸಂಗನಗೌಡರ, ಮಹೇಶ ಹರಕುಣಿ, ಮಮುಖಂಡರು, ಕಾರ್ಯಕರ್ತರು ಇದ್ದರು.

loading...