ಕುಮಾರಸ್ವಾಮಿ ನಡೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಗರಂ

0
7
loading...

ಬೆಂಗಳೂರು:ಮೈಸೂರು ಜಿಲ್ಲಾ ಉಸ್ತುವಾರಿ ನೇಮಕ ವಿಚಾರದಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಡೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸಚಿವರಿಗೆ ಉಸ್ತುವಾರಿ ಕೊಡುವಂತೆ ಮನವಿ ಮಾಡಿದ್ದರೂ ಕೂಡ ಜಿ.ಟಿ. ದೇವೇಗೌಡರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ನೀಡಿದಕ್ಕೆ ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದಾರೆ.
ತಮ್ಮ ಆಪ್ತರಿಗೆ ಉಸ್ತುವಾರಿ ನೀಡುವಂತೆ ಸಿದ್ದರಾಮಯ್ಯ ಕೇಳಿದ್ದರು,ಆದರೆ ಸಿದ್ದರಾಮಯ್ಯ ಮನವಿಗೆ ಸ್ಪಂದಿಸದೇ ಕುಮಾರಸ್ವಾಮಿ ಮೈಸೂರು ಉಸ್ತುವಾರಿಯನ್ನು ಜಿಟಿಡಿಗೆ ನೀಡಿದ್ದಾರೆ.ಹೀಗಾಗಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರ ಮುಂದೆ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

loading...