ಕೇಂದ್ರದ ಮಾಜಿ ಸಚಿವ ಗುರುದಾಸ್ ಕಾಮತ್ ಇನ್ನಿಲ್ಲ

0
4
loading...

ಮುಂಬೈ/ದೆಹಲಿ-ಕೇಂದ್ರದ ಮಾಜಿ ಸಚಿವ ಹಾಗೂ ಮಹಾರಾಷ್ಟ್ರದ ಕಾಂಗ್ರೆಸ್ ಧುರೀಣ ಗುರುದಾಸ್ ಕಾಮತ್(63) ಇಂದು ವಿಧಿವಶರಾಗಿದ್ದಾರೆ. ಕೆಲಕಾಲದಿಂದ ಅಸ್ವಸ್ಥರಾಗಿದ್ದ ಅವರು ಇಂದು ಬೆಳಗ್ಗೆ ದೆಹಲಿಯ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದರು. ಐದು ಬಾರಿ ಸಂಸದರಾಗಿದ್ದ ಅವರು 2009 ರಿಂದ 2011ರವರೆಗೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಸ್ಥಾನದೊಂದಿಗೆ ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಖಾತೆಯನ್ನೂ ಸಹ ನಿರ್ವಹಿಸಿದ್ದರು. ಮುಂಬೈ ಪ್ರಾದೇಶಿಕ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದರು.
ವೃತ್ತಿಯಲ್ಲಿ ವಕೀಲರೂ ಆಗಿದ್ದ ಕಾಮತ್ ಮಹಾರಾಷ್ಟ್ರದ ಅಗ್ರ ಕಾಂಗ್ರೆಸ್ ನಾಯಕರಲ್ಲಿ ಒಬ್ಬರಾಗಿದ್ದರು. ಗುರುದಾಸ್ ಕಾಮತ್ ನಿಧನಕ್ಕೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.

loading...