ಡಿ. ದೇವರಾಜ ಅರಸು ಜನ್ಮ ದಿನಾಚರಣೆ

0
3
loading...

ಕನ್ನಡಮ್ಮ ಸುದ್ದಿ-ಕೊಪ್ಪಳ: ಡಿ. ದೇವರಾಜ ಅರಸು ಅವರ 103 ನೇ ಜನ್ಮ ದಿನಾಚರಣೆಯನ್ನು ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿ. ದೇವರಾಜ ಅರಸುರವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಭಕ್ತಿ ನಮನ ಸಲ್ಲಿಸುವುದರ ಮೂಲಕ ಸರಳವಾಗಿ ಆಚರಿಸಲಾಯಿತು. ಸ್ಥಳೀಯ ನಗರ ಸಂಸ್ಥೆಗಳ ಚುನಾವಣಾ ನೀತಿ ಸಂಹಿತೆಯ ಇರುವ ಕಾರಣದಿಂದಾಗಿ ಜಿಲ್ಲಾಡಳಿತ ವತಿಯಿಂದ ಡಿ. ದೇವರಾಜ ಅರಸು ಅವರ ಜಯಂತಿ ಸೋಮವಾರದಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಯಿತು.
ಉಪ ವಿಭಾಗಾಧಿಕಾರಿ ಸಿ.ಡಿ. ಗೀತಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಚಿದಾನಂದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಡಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆಗೈದು ಭಕ್ತಿ ನಮನ ಸಲ್ಲಿಸಿದರು.

loading...