ದೇಶ ಕಂಡ ಮಹಾನ ನಾಯಕ ಅಟಲ ಜೀ ಇನ್ನಿಲ್ಲ

0
7
loading...

ನವದೆಹಲಿ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ, ರಾಜಕೀಯ ರಂಗದ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಚಿಕಿತ್ಸೆ ಫಲಕಾರಿಯಾಗದೆ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಇಂದು ವಿಧಿವಶರಾಗಿದ್ದಾರೆ. ಈ ವಿಚಾರವನ್ನು ಏಮ್ಸ್ ಆಸ್ಪತ್ರೆ ಆಡಳಿತ ಮಂಡಳಿ ಅಧಿಕೃತವಾಗಿ ಪ್ರಕಟಿಸಿದೆ.
ಹಲವು ವರ್ಷಗಳಿಂದ ಅನಾರೋಗ್ಯಕ್ಕೊಳಗಾಗಿದ್ದ ಅಟಲ್ ಬಿಹಾರಿ ವಾಜಪೇಯಿಯವರು ತಮ್ಮ ನಿವಾಸದಲ್ಲಿಯೇ ಚಿಕಿತ್ಸೆಯನ್ನು ಪಡೆಯುತ್ತಿದ್ದು, ಕೆಲ ದಿನಗಳ ಹಿಂದೆ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
93 ವರ್ಷದ ವಾಜಪೇಯಿಯವರು ಆರಂಭದಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದರಾದರೂ ಆಗಸ್ಟ್ 15ರಂದು ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ತೀವ್ರ ನಿಗಾ ಘಟಕದಲ್ಲಿ ಕೃತಕ ಉಸಿರಾಟದಲ್ಲಿ ಇರಿಸಲಾಗಿತ್ತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ವಾಜಪೇಯಿಯವರ ಆರೋಗ್ಯ ಪರಿಸ್ಥಿತಿ ಕುರಿತಂತೆ ವೈದ್ಯರೊಡನೆ ಸಮಾಲೋಚನೆ ನಡೆಸಿದ್ದರು. ತಜ್ಞ ವೈದ್ಯರ ಸತತ ಪ್ರಯತ್ನದ ನಡುವೆಯೂ ಅಟಲ್ ಬಿಹಾರಿ ವಾಜಪೇಯಿಯವರು ಬಾರದ ಲೋಕಕ್ಕೆ ತೆರಳಿದ್ದಾರೆ.

loading...