ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಿ: ಗೊಂಡಬಾಳ

0
8
loading...

ಕನ್ನಡಮ್ಮ ಸುದ್ದಿ-ಕೊಪ್ಪಳ: ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ದುಡಿದ ಹಾಗೂ ನಿಷ್ಠಾವಂತ ಕಾರ್ಯಕರ್ತರಿಗಾಗಿ ಮಾತ್ರ ನಗರ ಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಬೇಕು ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ, ಯುವ ಮುಖಂಡ ಮಂಜುನಾಥ ಜಿ. ಗೊಂಡಬಾಳ ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಪಕ್ಷಕ್ಕಾಗಿ ದುಡಿದವರು ಮತ್ತು ಸದಾ ಪಕ್ಷದ ಸಿದ್ಧಾಂತಗಳಿಗೆ ಬದ್ಧವಾಗಿ ಪಕ್ಷದ ಹೋರಾಟ, ಸಭೆ ಸಮಾರಂಭಗಳಿಗೆ ಬರುವ ಕಾರ್ಯಕರ್ತರು ಮತ್ತು ಮುಖಂಡರಿಗೆ ವಿಶೇಷವಾಗಿ ವಿದ್ಯಾವಂತ, ಪ್ರಜ್ಞಾವಂತರಿಗೆ ಟಿಕೆಟ್ ಕೊಡಬೇಕು ಎಂದು ಒತ್ತಾಯಿಸಿರುವ ಅವರು ಪಕ್ಷ ಕೇವಲ ಗೆಲುವು ನೋಡದೆ, ಸಮಾಜ ಸೇವೆ ಮತ್ತು ಸಮುದಾಯ ಸಂಘಟನೆಯನ್ನು ಸಹ ಪರಿಗಣಿಸಬೇಕು ಅಂದಾಗ, ಪಕ್ಷದ ಸಿದ್ಧಾಂತಗಳಲ್ಲಿ ನಂಬಿಕೆ ಇಟ್ವವರಿಗೆ ಶಕ್ತಿ ಬರುತ್ತದೆ ಎಂದು ತಿಳಿಸಿದ್ದಾರೆ.

loading...