ಪದವಿ ಕಾಲೇಜು ವೇಳಾಪಟ್ಟಿ ಬದಲಾವಣೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ

0
7
loading...

ಕನ್ನಡಮ್ಮ ಸುದ್ದಿ-ಕೊಪ್ಪಳ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ, ಬಿಕಾಂ ಪದವಿ ತರಗತಿಗಳನ್ನು 2 ಪಾಳಿಗಳಲ್ಲಿ ನಡೆಸಲು ತೀರ್ಮಾನಿಸಿ, ವೇಳಾಪಟ್ಟಿಯಲ್ಲಿನ ಸಮಯ ಬದಲಾವಣೆ ಮಾಡಿರುವುದನ್ನು ಖಂಡಿಸಿ ಎಸ್‍ಎಫ್‍ಐ ಸಂಘಟನೆ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕಾಲೇಜು ಆವರಣದಲ್ಲಿ ನೂರಾರು ವಿದ್ಯಾರ್ಥಿಗಳು ಹಾಗೂ ಎಸ್‍ಎಫ್‍ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಾಲೇಜು ಪಾಚಾರ್ಯರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಿಕಾಂ ತರಗತಿಯನ್ನು ಬೆಳಗ್ಗೆ 8 ಗಂಟೆಯಿಂದ 12 ಗಂಟೆವರೆಗೆ ಮಾಡಲಾಗಿದೆ. ಬಿಎ ತರಗತಿ ವೇಳೆಯನ್ನು 12 ಗಂಟೆಯಿಂದ 4 ಗಂಟೆವರೆಗೆ ಮಾಡಲಾಗಿದೆ. ಆದರೆ, ಗ್ರಾಮೀಣ ಭಾಗಗಳಿಂದಲೂ ವಿದ್ಯಾರ್ಥಿಗಳು ಕಾಲೇಜಿಗೆ ಬರುವವರಿದ್ದಾರೆ. ಇದರಿಂದಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಸಿಗದೇ, ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ. ಹಾಗಾಗಿ ಬೆಳಗ್ಗೆ 9 ರಿಂದ 2 ಗಂಟೆವರೆಗೂ ಕಾಲೇಜು ನಡೆಸುವಂತೆ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪ್ರಾಂಶುಪಾಲರ ವಿರುದ್ಧ ಘೋಷಣೆ ಕೂಗಿ ವಿದ್ಯಾರ್ಥಿಗಳು ತಮ್ಮ ಅಸಮಾಧಾನ ತೋಡಿಕೊಂಡರು.
ಬಿಜೆಪಿ ಮುಖಂಡ ಅಮರೇಶ ಕರಡಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಾಚಾರ್ಯರ ಜತೆ ಮಾತುಕತೆ ನಡೆಸಿ ತರಗತಿ ಸಮಯವನ್ನು ಸರಿಪಿಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡರು.
ಪ್ರಥಮ ದರ್ಜೆ ಕಾಲೇಜಿನಲ್ಲಿ 3,000 ವಿದ್ಯಾರ್ಥಿಗಳಿದ್ದು, ಇದರಿಂದಾಗಿ ವಿದ್ಯಾರ್ಥಿಗಳಿಗೆ ಕೊಠಡಿಗಳ ಕೊರತೆ ಆಗುತ್ತದೆ ಎಂದು ತರಗತಿಗಳ ವೇಳೆಯನ್ನು ಬದಲಾವಣೆ ಮಾಡಲಾಗಿದೆ ಇದನ್ನು ಸಭೆಯಲ್ಲಿ ಚರ್ಚೆ ಮಾಡಿ ನಂತರ ತಿರ್ಮಾಣಿಸಲಾಗುವುದು ಎಂದು ಪ್ರಾಂಶುಪಾಲರು ಹೇಳಿದರು.
ಎಸ್‍ಎಫ್‍ಐ ಜಿಲ್ಲಾಧ್ಯಕ್ಷ ಅಮರೇಶ ಕಡಗದ, ಶಿವಕುಮಾರ, ಹನಮಂತ, ಸಂತೋಷ, ವಿಜಯಲಕ್ಷ್ಮೀ, ಭಾಗ್ಯ, ಮಹೇಶಗೌಡ ಪಾಟೀಲ್, ಸರಸ್ವತಿ, ವಿದ್ಯಾವತಿ, ಮಂಜುಳಾ, ಬಸಮ್ಮ, ನೇತ್ರಾವತಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಇದ್ದರು.

loading...