ಬೆಂಗಳೂರಿಗೆ ಹೋಗುತ್ತಿದ್ದ ರೈಲು ಸಂಚಾರ ವ್ಯತ್ಯಯ: ಪರದಾಡಿದ ಪರೀಕ್ಷಾರ್ಥಿಗಳು

0
2
loading...

ಕನ್ನಡಮ್ಮ ಸುದ್ದಿ-ಹುಬ್ಬಳ್ಳಿ: ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರಿಗೆ ಹೊಗುತ್ತಿದ್ದ ರಾಣಿ ಚನ್ನಮ್ಮ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯದಲ್ಲೇ ಸುಮಾರು 7 ಗಂಟೆಗಳ ಕಾಲ ನಿಂತ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತೆರಳ ಬೇಕಿದ್ದ ಪರೀಕ್ಷಾರ್ಥಿಗಳು ಪರದಾಡುವಂತಾಗಿತ್ತು.
ಶನಿವಾರ ಮಧ್ಯಾಹ್ನ ಕೊಲ್ಹಾಪುರ ಬಿಟ್ಟ ಈ ಟ್ರೈನ್ ಭಾನುವಾರ ಬೆಳಗ್ಗೆ 6.45ಕ್ಕೆ ಬೆಂಗಳೂರು ತಲುಪಬೇಕಿತ್ತು. ಆದ್ರೆ 7 ಗಂಟೆಗಳ ಕಾಲ ತಡವಾದ ಹಿನ್ನೆಲೆಯಲ್ಲಿ ಈ ಟ್ರೈನ್‍ಗಾಗಿ ಎಲ್ಲ ನಿಲ್ದಾಣಗಳಲ್ಲಿ ಕಾಯುತ್ತ ನಿಂತ ಪ್ರಯಾಣಿಕರು ರೋಸಿಹೋಗಿದ್ದರು.
ಬೆಳಗಾವಿ ಹಾಗೂ ಧಾರವಾಡ ಭಾಗದಿಂದ ಬೆಂಗಳೂರಿಗೆ ಡಿ.ಆರ್ ಪರೀಕ್ಷೆ ಬರೆಯಲು ಇದೇ ಟ್ರೈನ್ ನಲ್ಲಿ ಬರ್ತಾ ಇದ್ದ ಸಾವಿರಾರೂ ಅಭ್ಯರ್ಥಿಗಳು ಸಮಯಕ್ಕೆ ಸರಿಯಾಗಿ ಬೆಂಗಳೂರು ತಲುಪಲಾಗದೇ ಪರೀಕ್ಷೆಯಿಂದ ವಂಚಿತರಾಗಿದ್ದರು. ಈ ಹಿನ್ನೆಲೆಯಲ್ಲಿ ಈಗ ಉತ್ತರ ಕರ್ನಾಟಕ ಭಾಗದ ಸಾವಿರಾರೂ ಅಭ್ಯರ್ಥಿಗಳು ತಮ್ಮ ತಪ್ಪು ಇಲ್ಲದೆ ಡಿ.ಆರ್ ಪರೀಕ್ಷೆಯಿಂದ ವಂಚಿತರಾಗುವಂತಾಗಿದ್ದು, ಈ ಕೂಡಲೇ ಪರೀಕ್ಷೆ ಮುಂದೂಡಬೇಕು. ಇಲ್ಲವೇ ರಾಣಿ ಚನ್ನಮ್ಮ ಟ್ರೈನ್‍ಗೆ ಟಿಕೆಟ್ ತೆಗೆಸಿದ್ದ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಮರು ಅವಕಾಶ ಕಲ್ಪಿಸಿಕೊಡಬೇಕು ಎಂದು ಆಗ್ರಗಹಿಸಿದ್ದಾರೆ.
ಬೆಂಗಳೂರು/ಹುಬ್ಬಳ್ಳಿ ಸಿಲಿಕಾನ್ ಸಿಟಿಗೆ ಹೊರಟ್ಟಿದ್ದ ರೈಲು 7 ಗಂಟೆ ವಿಳಂಬವಾಗಿದ್ದ ಪರಿಣಾಮ ಪೊಲೀಸ್ ಪರೀಕ್ಷೆ ಎದುರಿಸಲು ಸಾಧ್ಯವಾಗದವರಿಗೆ ಮರು ಪರೀಕ್ಷೆ ಮಾಡಲು ಅವಕಾಶ ಕಲ್ಪಿಸುವುದಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಡಿಎಆರ್ ಪರೀಕ್ಷೆಯಿಂದ ಕೆಲ ವಿದ್ಯಾರ್ಥಿಗಳ ವಂಚನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಣಿ ಚೆನ್ನಮ್ಮ ಎಕ್ಸ್ ಪ್ರೆಸ್ ರೈಲು ತಡವಾಗಿ ಬೆಂಗಳೂರು ತಲುಪಿದ ಕಾರಣ ಪರೀಕ್ಷೆ ಬರೆಯಲು ಆಗದವರಿಗೆ ಮರುಪರೀಕ್ಷೆಗೆ ಅನುವು ಮಾಡಿಕೊಡುತ್ತೇನೆ. ಹುಬ್ಬಳ್ಳಿ ಪರೀಕ್ಷಾ ಕೇಂದ್ರಕ್ಕೂ ಅವಕಾಶ ಮಾಡುತ್ತೇನೆ. ಮುಂದೆ ಈ ರೀತಿಯ ಘಟನೆಗಳಾಗದಂತೆ ನಿಗಾ ವಹಿಸಲು ರೈಲ್ವೆ ಸಚಿವರ ಜೊತೆಗೆ ನಾನು ಮಾತನಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಭಾನುವಾರ ಪೊಲೀಸ್ ಪರೀಕ್ಷೆ ಬರೆಯಬೇಕಿದ್ದ 2 ಸಾವಿರ ಅಭ್ಯರ್ಥಿಗಳಿಗೆ ರೈಲು ವಿಳಂಬವಾದ ಹಿನ್ನೆಲೆಯಲ್ಲಿ ಆಘಾತ ಉಂಟಾಗಿದೆ. ಘಟನೆಯ ಬಗ್ಗೆ ಡಿಜಿಪಿಯವರಿಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ಮತ್ತೊಮ್ಮೆ ಪರೀಕ್ಷೆಗೆ ಅವಕಾಶ ನೀಡುವ ಬಗ್ಗೆ ಪೊಲೀಸ್ ಇಲಾಖೆಯಿಂದ ನಿರ್ಧರಿಸಲಾಗುವುದು ಅಂತ ಹುಬ್ಬಳ್ಳಿಯಲ್ಲಿ ಡಿಸಿಪಿ ರೇಣುಕಾ ಸುಕುಮಾರ್ ಹೇಳಿದ್ದಾರೆ.

loading...