ಭಾರತ ಸ್ಕೌಟ್ಸ್ & ಗೈಡ್ಸ್ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ

0
3
loading...

ಕನ್ನಡಮ್ಮ ಸುದ್ದಿ-ಕೊಪ್ಪಳ: ಸದ್ಭಾವನಾ ದಿನದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಭಾರತ ಸ್ಕೌಟ್ಸ್ & ಗೈಡ್ಸ್ ಕೊಪ್ಪಳ ಸಂಸ್ಥೆಯ 170 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಉಪ ವಿಭಾಗಾಧಿಕಾರಿ ಸಿ.ಡಿ. ಗೀತಾ ಪ್ರತಿಜ್ಞಾವಿಧಿ ಬೋಧಿಸಿದರು. ಭಾರತ ಸ್ಕೌಟ್ಸ್ & ಗೈಡ್ಸ್ ಸಂಸ್ಥೆಯ ರಾಜ್ಯ ಸಹಾಯ ಸಂಘಟನಾ ಆಯುಕ್ತರಾದ ಮಲ್ಲೇಶ್ವರಿ ಜುಜಾರೆ ಅವರು ಮಾತನಾಡಿ, ನಾವೆಲ್ಲ ಒಂದು ಎಂಬುವುದನ್ನು ಸಾರವನ್ನು ಸಾರುವ ಉದ್ದೇಶಕ್ಕಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದುರು. ಸಂಸ್ಥೆಯ ಜಿಲ್ಲಾ ತರಬೇತಿ ಆಯುಕ್ತರಾದ ಶೀಕಾಂತ ಮಾಸಗಟ್ಟಿ, ತಾಲೂಕಾ ಕಾರ್ಯದರ್ಶಿಗಳಾದ ಮಲ್ಲಪ್ಪ ಗುಡದಣ್ಣವರ, ವಿಶ್ವನಾಥರೆಡ್ಡಿ, ಎಸ್.ಬಿ. ನಾಯಕ ಸೇರಿದಂತೆ ಎಸ್.ಎಫ್.ಎಸ್ ಹಾಗೂ ಆದರ್ಶ ಶಾಲೆಯ ಶಿಕ್ಷಕರು ಮತ್ತು ಸ್ಕೌಟ್ಸ್ & ಗೈಡ್ಸ್ ವಿದ್ಯಾರ್ಥಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನೆರೆ ಸಂತ್ರಸ್ತರಿಗೆ ಪರಿಹಾರ ನೆರವು: ಸಾರ್ವಜನಿಕರಿಂದ ಸಂಗ್ರಹಿಸಲಾದ ರೂ. 15067/- ದೇಣಿಗೆ ಹಣವನ್ನು ಅಪರಜಿಲ್ಲಾಧಿಕಾರಿಗಳಿಗೆ ಚೆಕ್ ಮೂಲಕ ನೀಡಲಾಗಿದೆ.

loading...