ಮಕ್ಕಳಲ್ಲಿನ ರಕ್ತಹೀನತೆ ತಡೆಗೆ ಜಂತುಹುಳು ನಿವಾರಣೆ ಅಗತ್ಯ: ವೆಂಕಟ್‍ರಾಜಾ

0
6
loading...

ಕನ್ನಡಮ್ಮ ಸುದ್ದಿ-ಕೊಪ್ಪಳÀ: ಮಕ್ಕಳಲ್ಲಿ ಕಂಡುಬರುವ ಜಂತುಹುಳ ನಿವಾರಣೆಗಾಗಿ ರಾಷ್ಟ್ರ ಮಟ್ಟದಲ್ಲಿ ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಹೇಳಿದರು.
ರಾಷ್ಟ್ರೀಯ ಜಂತು ಹುಳ ನಿವಾರಣಾ ಅಂಗವಾಗಿ ನಗರದ ಗವಿಸಿದ್ದೇಶ್ವರ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ “ರಾಷ್ಟ್ರೀಯ ಜಂತು ಹುಳ ನಿವಾರಣಾ” ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ “ಅಲ್ಬೆಂಡಜೋಲ್” ಮಾತ್ರೆ ನೀಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ಎಲ್ಲಿ ಸ್ವಚ್ಛತೆ ಕೊರತೆ ಇರುತ್ತದೆಯೋ ಅಂತಹ ಸ್ಥಳಗಳಲ್ಲಿ ಜಂತುಹುಳಗಳ ಲಭ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ ನಮ್ಮ ಸುತ್ತ ಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಬೇಕು. ಜಂತುಹುಳ ನಿವಾರಣೆಗಾಗಿ 01 ರಿಂದ 19 ವರ್ಷದೊಳಗಿನ ಎಲ್ಲ ಮಕ್ಕಳನ್ನು ನಿಮ್ಮ ಹತ್ತಿರದಲ್ಲಿರುವ ಶಾಲೆಗಳಿಗೆ ಹಾಗೂ ಅಂಗನವಾಡಿ ಕೆಂದ್ರಗಳಿಗೆ ಕಳುಹಿಸಿ ಜಂತುಹುಳ ನಿವಾರಣೆ ಮಾತ್ರೆಯನ್ನು ಉಚಿತವಾಗಿ ಪಡೆಯಿರಿ ಎಂದು ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಹೆಚ್. ಅವರು ಮಾತನಾಡಿ, ಪ್ರತಿ 6 ತಿಂಗಳಿಗೊಮ್ಮೆ ಜಂತು ಹುಳ ನಿವಾರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ.
1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಅಂಗನವಾಡಿ ಕೇಂದ್ರಗಳಲ್ಲಿ, ಸರ್ಕಾರಿ ಶಾಲೆಗಳಲ್ಲಿ ಹಾಗೂ ಖಾಸಗಿ ಶಾಲೆಗಳಲ್ಲಿ ಉಚಿತವಾಗಿ “ಅಲ್ಬೆಂಡಜೋಲ್” ಎಂಬ ಮಾತ್ರೆಯನ್ನು ನೀಡಲಾಗುತ್ತದೆ. ಈ ಮಾತ್ರೆಯನ್ನು ಬಾಯಿಯಲ್ಲಿ ಹಾಕಿಕೊಂಡು ಕಡಿದು ತಿಂದು ನುಂಗಬೇಕು. ಈ ಮಾತ್ರೆ ತೆಗೆದುಕೊಳ್ಳವುದರಿಂದ ಜಂತುಹುಳುಗಳ ನಿವಾರಣೆಯಾಗಲಿದೆ ಎಂದು ವಿವರಿಸಿದರು.

loading...