ಮಕ್ಕಳಲ್ಲಿರುವ ಪ್ರತಿಭೆ ಹೊರಹಾಕಲು ಪ್ರತಿಭಾಕಾರಂಜಿ ಅವಶ್ಯ

0
8
loading...

ಬಸವನಬಾಗೇವಾಡಿ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಪ್ರತಿಭಾ ಕಾರಂಜಿ ಒಂದು ಅತ್ಯತ್ತಮ ವೇದಿಕೆಯಾಗಿದ್ದು ಜಗತ್ತನ್ನು ಮುನ್ನೆಡೆಸುವ ಶಿಕ್ಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಮುನ್ನೆಡಸಬೇಕು ಎಂದು ತಹಶೀಲ್ದಾರ ಎಂ.ಎನ್. ಚೋರಗಸ್ತಿ ಹೇಳಿದರು.
ಸ್ಥಳೀಯ ಎಂಪಿಎಸ್ ಶಾಲಾ ಅವರಣದಲ್ಲಿ ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೆÃತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೆÃತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ನೇತೃತ್ವದಲ್ಲಿ ಸೋಮವಾರ ನಡೆದ ೨೦೧೮-೧೯ನೇ ಸಾಲಿನ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ದೇಶದ ಉಜ್ವಲ ಭವಿಷ್ಯಕ್ಕಾಗಿ ಮಕ್ಕಳು ಶಿಕ್ಷಣವಂತರಾಗಿ ಉತ್ತಮ ಪ್ರಜೆಗಳಾಗಿ ಸುಂದರ ಬದುಕನ್ನು ರೂಪಿಸಿಕೊಳ್ಳಬೇಕೆಂದು ಹೇಳಿದರು.

ಸ್ಪರ್ಧೆಗಳು ನಿರಂತರವಾಗಿ ಮುನ್ನಡೆದಲ್ಲಿ ಮಕ್ಕಳಿಗೆ ಸೂಕ್ತ ವೇದಿಕೆ ಏರ್ಪಡಿಸಿ ಮಕ್ಕಳಲ್ಲಿರುವ ಪ್ರತಿಭೆ ಹೊರಹಾಕಲು ಶಿಕ್ಷಕರು ನಿರಂತರವಾಗಿ ಶ್ರಮಿಸಬೇಕು, ಶಿಕ್ಷಕರು ಕಾಲಕಾಲಕ್ಕೆ ತಮ್ಮ ಶಾಲೆಯ ಮಕ್ಕಳನ್ನು ವಿವಿಧ ಕರ‍್ಯಕ್ರಮದಲ್ಲಿ ಪಾಲ್ಗೊÃಳ್ಳುವಂತೆ ನೋಡಿಕೊಳ್ಳಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಕರ‍್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ತಾಲ್ಲೂಕಿನ ಗ್ರಾಮೀಣ ಭಾಗದ ಮಕ್ಕಳು ಜಿಲ್ಲಾ ವಿಭಾಗ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆದುಕೊಳ್ಳುವಂತೆ ಶಿಕ್ಷಕರು ಮಕ್ಕಳನ್ನು ತಯಾರು ಮಾಡುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕೆಂದು ಹೇಳಿದರು.

ಕರ‍್ಯಕ್ರಮದಲ್ಲಿ ಸಹಕಾರಿ ಮಹಾಮಂಡಳದ ನಿರ್ದೆÃಶಕ ಶಿವನಗೌಡ ಬಿರಾದಾರ, ಜಿಲ್ಲಾ ಪಂಚಾಯ್ತಿ ಸದಸ್ಯ ಜೈಸಿಂಗ್ ನಾಯಕ, ಮುಖಂಡ ಅಪ್ಪಣ್ಣ ಐಹೊಳ್ಳಿ, ಕ್ಷೆÃತ್ರ ಶಿಕ್ಷಣಾಧಿಕಾರಿ ಎಂ.ಎ. ಗುಳೇದಗುಡ್ಡ, ಕ.ರಾ.ಸ.ನೌ. ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ, ಅ.ಕ.ಪ್ರಾ.ಶಾ.ಶಿ. ಸಂಘದ ಅಧ್ಯಕ್ಷ ಶರಣಪ್ಪ ಮಾದರ, ಕ.ಪ್ರಾ.ಶಾ.ಶಿ. ಸಂಘದ ತಾಲೂಕಾ ಘಟಕದ ಅಧ್ಯಕ್ಷ ಸಿ.ಟಿ.ಮಾದರ, ಕ.ರಾ.ಪ್ರೌಢ ಶಾಲಾ ಸಹಶಿಕ್ಷಕರ ಸಂಘದ ತಾಲೂಕಾ ಘಟಕದ ಅಧ್ಯಕ್ಷ ಎ.ಎಸ್.ಹಂಚಲಿ, ತಾಪಂ ವ್ಯವಸ್ಥಾಪಕ ಐ.ಎಸ್. ನಿಡೋಣಿ, ಎ.ಐ.ಹಳ್ಳೂರ ಶಿಕ್ಷಕಿ ಗಿರಿಜಾ ಪಾಟೀಲ ಉಪಸ್ಥಿತರಿದರು.

loading...