ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ;ಗುಡ್ಡ ಕುಸಿತ

0
7
loading...

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ರಾಜ್ಯ ಹೆದ್ದಾರಿ 66 ರ ಬಳಿ ವಿವಿಧೆಡೆ ಒಟ್ಟು ನಾಲ್ಕು ಕಡೆಗಳಲ್ಲಿ ಗುಡ್ಡ ಕುಸಿತ ಉಂಟಾಗಿದೆ.
ರಾಜ್ಯ ಹೆದ್ದಾರಿ ಮೇಲೆ ಗುಡ್ಡದ ಮಣ್ಣು ಕುಸಿದು ಬಿದ್ದಿದ್ದು,ಹೆದ್ದಾರಿಯಲ್ಲಿ ಸಂಪೂರ್ಣ ರಸ್ತೆ ಸಂಚಾರ ಬಂದ್ ಆಗಿದೆ. ಕಳಸ ಮತ್ತು ಮಂಗಳೂರು ಸಂಚಾರ ಸಂಪೂರ್ಣ ಬಂದ್ ಆಗಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಕುದುರೆ ಮುಖ ಸಮೀಪ ಕೂಡ ಗುಡ್ಡದ ಮಣ್ಣು ಕುಸಿದು ಬಿದ್ದಿದೆ.ವಾಹನದಲ್ಲಿ ಬಂದಿದ್ದಂತಹ ಪ್ರಯಾಣಿಕರು ನಡೆದುಕೊಂಡೇ ಆ ಭಾಗದಿಂದ ಈ ಭಾಗದ ಕಡೆ ಬರುವಂತವಾಗಿದೆ.ಚಾರ್ಮಾಡಿ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ಮಾಡಿ ರುವ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಘನ ವಾಹನಗಳು ಮಂಗಳೂರಿಗೆ ಹೋಗುತ್ತಿದ್ದವು.
ಕುದುರೆ ಮುಖ ಮಾರ್ಗ ಕೂಡ ಸಂಪೂರ್ಣ ಬಂದ್ ಆಗಿದ್ದು, ಇಲ್ಲಿಯೂ ವಾಹನ ಸವಾರರು ಪರದಾಡುವಂತಾಗಿದೆ. ಕುದುರೆ ಮುಖ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿದ್ದು ಸ್ಥಳದಲ್ಲಿಯೇ ಮೊಕ್ಕಂ ಹೂಡಿದ್ದಾರೆ.

loading...