ಮಹಿಳಾ ಆಯೋಗದ ಅಧ್ಯಕ್ಷೆ ಜಿಲ್ಲಾಸ್ಪತ್ರೆಗೆ ಭೇಟಿ

0
7
loading...

ವಿಜಯಪುರ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷಿö್ಮÃಬಾಯಿ ಅವರು ವಿಜಯಪುರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ವಿವಿಧ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ಜಿಲ್ಲಾಸ್ಪತ್ರೆಯ ಹೆರಿಗೆ ಕೋಣೆ, ಮಹಿಳಾ ವಿಶೇಷ ಚಿಕಿತ್ಸಾ ಘಟಕ, ರೇಡಿಯಾಲಜಿ ವಿಭಾಗ, ಶಸ್ತç ಚಿಕಿತ್ಸಾ ಹೊರ ರೋಗ ವಿಭಾಗ ಸೇರಿದಂತೆ ಇನ್ನಿತರ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ರೋಗಿಗಳಿಗೆ ಮೊದಲನೇ ಮಹಡಿಯಲ್ಲಿ ಕುಳಿತುಕೊಳ್ಳಲು ಸೂಕ್ತ ಆಸನಗಳ ವ್ಯವಸ್ಥೆ ಮಾಡಬೇಕು. ಆಸ್ಪತ್ರೆಗೆ ಓರ್ವ ರೇಡಿಯಾಲಾಜಿಸ್ಟ್ ಹಾಗೂ ಓರ್ವ ಅರವಳಿಕೆ ತಜ್ಞರ ನೇಮಕಕ್ಕೆ ಸಂಬಂಧಪಟ್ಟಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಲಭ್ಯವಿರುವ ವ್ಯವಸ್ಥೆಗಳ ಬಗ್ಗೆ ವೈದ್ಯರು ಮತ್ತು ಸಿಬ್ಬಂದಿಗಳ ಕೊರತೆ, ಇತರೆ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿ, ಸಾಮಾಜಿಕ ಕಳಕಳಿಯೊಂದಿಗೆ ರೋಗಿಗಳಿಗೆ ಸೇವೆ ಕಲ್ಪಿಸುವಂತೆ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

loading...