ಮಹಿಳೆಯರ ಸಬಲೀಕರಣಕ್ಕೆ ಗ್ರಾಮಾಭಿವೃದ್ಧಿ ಯೋಜನೆ ಬದ್ಧ

0
0
loading...

ಕನ್ನಡಮ್ಮ ಸುದ್ದಿ-ಗಂಗಾವತಿ: ಗ್ರಾಮೀಣ ಪ್ರದೇಶಗಳ ಮಹಿಳೆಯರ ಸಬಲೀಕರಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸದಾ ಸಿದ್ಧವಾಗಿರುತ್ತದೆ ಎಂದು ಯೋಜನೆಯ ತಾಲೂಕು ಅಧಿಕಾರಿ ಶೇಖರಗೌಡ ತಿಳಿಸಿದರು.
ತಾಲೂಕಿನ ಮರ್ಲಾನಹಳ್ಳಿ ಗ್ರಾಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಶುಕ್ರವಾರ ಹಮ್ಮಿಕೊಂಡಿದ್ದ ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಯೋಜನೆಯಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದೆ. ಸಂಸ್ಥೆಯಿಂದ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದೇವೆ. ಕಾರಟಗಿ ಪಟ್ಟಣ ವ್ಯಾಪ್ತಿಯಲ್ಲಿ 338 ವಲಯಗಳಿವೆ. 3400 ಮಹಿಳಾ ಸದಸ್ಯರಿದ್ದಾರೆ ಎಂದು ತಿಳಿಸಿದರು.
ಮರ್ಲಾನಹಳ್ಳಿ ವ್ಯಾಪ್ತಿಯಲ್ಲಿ 71 ಮಹಿಳಾ ಗುಂಪುಗಳಿವೆ. 754 ಸದಸ್ಯರ ಮಹಿಳೆಯರಿದ್ದಾರೆ ಎಂದು ಹೇಳಿದರು. ಈ ಯೋಜನೆಯಲ್ಲಿ ಸದಸ್ಯತ್ವವನ್ನು ಹೊಂದಿರುವ ಮಹಿಳೆಯರು ಇದರ ಲಾಭ ಪಡೆಯುತ್ತಾರೆ ಎಂದು ತಿಳಿಸಿದರು. ಕಾರ್ಯಕ್ರಮವನ್ನು ಗ್ರಾಪಂ ಅಧ್ಯಕ್ಷ ಕರಿಯಪ್ಪ ಉದ್ಘಾಟಿಸಿದರು. ಜಿಲ್ಲಾ ನಿರ್ದೇಶಕ ಎಚ್‌.ಆಯ್‌.ಮುರಳಿಧರ, ಸಿದ್ದಣ್ಣ, ಸುನಿತಾ, ಶಶಿಕುಮಾರ, ಮಂಜುಳಾ ಹಿರೇಮಠ ಪಾಲ್ಗೊಂಡಿದ್ದರು.

loading...