ಮಾಜಿ ಲೋಕಸಭಾ ಸ್ಪೀಕರ್ ಸೋಮನಾಥ ಚಟರ್ಜಿ ಇನ್ನಿಲ್ಲ

0
10
loading...

ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಲೋಕಸಭೆಯ ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ ಇಂದು ಕೊನೆಯುಸಿರೆಳೆದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ 89 ವರ್ಷದ ಸೋಮನಾಥ ಚಟರ್ಜಿಯವರು ಕಳೆದ ಮಂಗಳವಾರದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಭಾನುವಾರ ಹೃದಯಾಘಾತವಾಗಿತ್ತು.

ಈ ಹಿನ್ನಲೆಯಲ್ಲಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿಟ್ಟು ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.

loading...