ಮೋದಿ ಮಣಿಸಲು ಒಂದಾದ ಪ್ರತಿಪಕ್ಷಗಳ

0
6
loading...

ನವದೆಹಲಿ-ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಉದ್ದೇಶದಿಂದ ಪ್ರಸ್ತಾವಿತ ಸಮಾನಮನಸ್ಕ ವಿರೋಧ ಪಕ್ಷಗಳ ಮಹಾಮೈತ್ರಿಗೆ ಸೇರದಿರಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಅಮ್ ಆದ್ಮಿ ಪಕ್ಷ (ಎಎಪಿ) ನಿರ್ಧರಿಸಿದೆ. ಈ ಬೆಳವಣಿಗೆಯಿಂದ 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಘಟಬಂಧನ್ ಉದ್ದೇಶಕ್ಕೆ ಹಿನ್ನಡೆಯಾಗಿದೆ.
ಈ ಮೈತ್ರಿಗೆ ಎಎಪಿ ಸೇರುವುದಿಲ್ಲ ಎಂದು ಪಕ್ಷದ ಪರಮೋಚ್ಚ ನಾಯಕ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ. ಮಹಾಮೈತ್ರಿಗೆ ಮುಂದಾಗಿರುವ ಪಕ್ಷಗಳು ದೇಶದ ಅಭಿವೃದ್ದಿಯಲ್ಲಿ ಯಾವುದೇ ಮಹತ್ವದ ಪಾತ್ರ ವಹಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಅವರು, ಮುಂಬರುವ ಚುನಾವಣೆಯಲ್ಲಿ ಯಾವುದೇ ಪಕ್ಷದ ಜೊತೆ ಎಎಪಿ ಸಖ್ಯ ಬೆಳಸುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ಮುಂದುವರಿಸಿದ ಅವರು, ದೆಹಲಿಯಲ್ಲಿ ಅಭಿವೃದ್ದಿ ಕಾರ್ಯಗಳನ್ನು ಪೂರ್ಣಗೊಳಿಸಿಲ್ಲ. ಜನರ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಕೈಗೊಳ್ಳುತ್ತಿರುವ ಎಲ್ಲ ಯೋಜನೆಗಳಿಗೂ ಬಿಜೆಪಿ ಅಡ್ಡಿಯುಂಟು ಮಾಡುತ್ತಿದೆ ಎಂದು ಆರೋಪಿಸಿದರು.

loading...