ಲಕ್ಷ್ಮೀ ಹೆಬ್ಬಾಳಕರ ಪಿಎಲ್ ಡಿ ಚುನಾವಣೆಯಲ್ಲಿ ರಾಜಕೀಯ ಮಾಡದಿರಿ: ಶಾಸಕ ಸತೀಶ

0
69
loading...

ಕನ್ನಡಮ್ಮ ಸುದ್ದಿ- ಬೆಳಗಾವಿ:ಶಾಸಕಿ‌ ಲಕ್ಷ್ಮೀ ಹೆಬ್ಬಾಳಕರ ಅವರು ಪಿಎಲ್ ಡಿ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಸಲಹೆ‌ ನೀಡಿದ್ದಾರೆ.

ಅವರು ಮಾಧ್ಯಮಗಳೊಂದಿಗೆ ಮಂಗಳವಾರ ಮಾತನಾಡಿ, ಪ್ರತಿ ವರ್ಷ ಅದಲ್ಲೂ ಕಳೆದ ಇಪ್ಪತ್ತು ವರ್ಷಗಳಿಂದ ಪಿಎಲ್ ಡಿ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರ ಹುದ್ದೆಗಳಿಗೆ ಅವಿರೋಧ ಆಯ್ಕೆ ನಡೆಯುತ್ತ ಬಂದಿದೆ. ಈ ಬಾರಿಯೂ ಅದೇ ರೀತಿಯ ಆಯ್ಕೆಯಾಗಿದ್ದು, ಹೀಗೆ ಆಯ್ಕೆ ಆದ ಮೇಲೆ ಆ ಸಂಪ್ರದಾಯ ಮುರಿಯಲು ಲಕ್ಷ್ಮಿ ಹೆಬ್ಬಾಳಕರ್ ಪ್ರಯತ್ನಿಸಿರವುದು ಸರಿಯಲ್ಲ ಎಂದು ಹೇಳಿದರು.

ಬ್ಯಾಂಕಿನ ಅಭಿವೃದ್ಧಿಗೆ ಪೂರಕವಾಗುವಂತೆ ಅಧ್ಯಕ್ಷ – ಉಪಾಧ್ಯಕ್ಷರನ್ನು ಆಯ್ಕೆ ಮಾಡುವ ಸಂಪ್ರದಾಯ ಮುಂದುವರಿಯಬೇಕು. ಈಸಂಸ್ಥೆಯನ್ನು ರಾಜಕೀಯ ರಹಿತವಾಗಿ ಬೆಳೆಸಬೇಕು. ಅಷ್ಟಕ್ಕೂ ಅವಿರೋಧ ಆಯ್ಕೆ ಯಾರೋ ಒಬ್ಬರು ಮಾಡಿದ್ದಲ್ಲ. ಬದಲಾಗಿ ಆ ಭಾಗದ ಮುಖಂಡರು, ಶಾಸಕರು ಜತೆಯಾಗಿ ಸಮಾಲೋಚನೆ ನಡೆಸಿ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಆಯ್ಕೆ ಮಾಡಲಾಗಿರುತ್ತದೆ ಎಂದು ಹೇಳಿದರು.

ಹಾಗೆ ನೋಡಿದರೆ ಅಧ್ಯಕ್ಷ -ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮುಂದಕ್ಕೆ ಹೋಗಿದ್ದಕ್ಕೆ ಬೇರೆ ಕಾರಣವಿದೆ. ಯಾರದೋ ಒತ್ತಡಕ್ಕೆ ಮಣಿದು ಅದನ್ನು ಮುಂದಕ್ಕೆ ಹಾಕಿಲ್ಲ ಎಂದು ಸ್ಪಷ್ಟಪಡಿಸಿದರು

loading...