ವಿದ್ಯಾರ್ಥಿಗಳಿಗೆ ಕ್ರೀಡಾ ಮನೋಭಾವನೆ ಬೆಳೆಸಿ: ಪುಂಡಲೀಕ

0
8
loading...

ಕನ್ನಡಮ್ಮ ಸುದ್ದಿ-ಜಮಖಂಡಿ : ದೈಹಿಕ ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಿದೆ. ಮಕ್ಕಳಿಗೆ ಪಠ್ಯೆ ವಿಷಯದ ಜೊತೆಗೆ ಕ್ರೀಡಾ ಮನೋಭಾವನೆ ಬೆಳೆಸುವ ಮೂಲಕ ಕ್ರೀಡಾ ಸಾಧಕರಾಗಿ ಹೊರಹೊಮ್ಮುವಂತೆ ಶಿಕ್ಷಕರು, ಪಾಲಕರು ಪ್ರೋತ್ಸಾಹಿಸಬೇಕೆಂದು ಜಿಲ್ಲಾ ಪಂಚಾಯತ ಸದಸ್ಯ ಪುಂಡಲೀಕ ಪಾಲಭಾಂವಿ ಹೇಳಿದರು.
ಮಧುರಖಂಡಿ ಸರಕಾರಿ ಪ್ರೌಢಶಾಲೆಯಲ್ಲಿ ಹಿಪ್ಪರಗಿ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಮಕ್ಕಳು ಸುಸಂಸ್ಕೃತರಾಗಿ ಬೆಳೆಯಲು ಇಕ್ಷಣ ಅವಶ್ಯ ಎಂದರು.
ಎಸ್‌ಡಿಎಂಸಿ ಅಧ್ಯಕ್ಷ ಶಂಕರ ಹಿಡಕಲ್‌ ಅಧ್ಯಕ್ಷತೆ ವಹಿಸಿದ್ದರು.
ಈ ವೇಳೆ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು, ಪಿಕೆಪಿಎಸ್‌ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವನಿರ್ದೇಶಕರು, ಗ್ರಾಮದ ಗಣ್ಯರು ಅತಿಥಿಗಳಾಗಿ ಆಗಮಿಸಿದ್ದರು. ಪ್ರಭಾರ ಮುಖ್ಯಗುರು ಎಸ್‌.ಆರ್‌.ಕಾಖಂಡಕಿ ಸ್ವಾಗತಿಸಿದರು. ಎನ್‌.ಎನ್‌.ಬೇವೂರ ನಿರೂಪಿಸಿದರು. ಎಸ್‌.ಸಿ.ಕೆಂಭಾವಿ ವಂದಿಸಿದರು.

loading...