ವ್ಯಾಪಾರಸ್ಥರ ಕುಂದುಕೊರತೆ ಆಲಿಸಿದ ಜಿಲ್ಲಾಧಿಕಾರಿ

0
5
loading...

ಕನ್ನಡಮ್ಮ ಸುದ್ದಿ-ಹುಬ್ಬಳ್ಳಿ: ಆಧುನಿಕತೆಗೆ ತಕ್ಕಂತೆ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ನಗರದ ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸುವ ಮತ್ತು ವ್ಯಾಪರಸ್ಥರ ಕುಂದುಕೊರತೆ ನಿವಾರಿಸುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ. ದೀಪಾ ಇಂದು ಜನತಾ ಬಜಾರ್‍ಗೆ ಬೇಟಿ ನೀಡಿ ವ್ಯಾಪಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ವ್ಯಾಪಾರಸ್ಥರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನವೀನ ಮಾದರಿಯ ಮಾರುಕಟ್ಟೆ ನಿರ್ಮಾಣಕ್ಕಾಗಿ ಮತ್ತು ಕೈಗೊಳ್ಳಬಹುದಾದ ಕಾಮಗಾರಿಗಳ ಕುರಿತಾಗಿ ಪರಿಶೀಲನೆ ನಡೆಸಿದರು. ವ್ಯಾಪರಸ್ಥರು ಅನುಭವಿಸುತ್ತಿರುವ ಸಂಕಷ್ಟಗಳ ಕುರಿತಾಗಿ ಸ್ವತಃ ಜಿಲ್ಲಾಧಿಕಾರಿಗಳೇ ಸಮಸ್ಯೆಗಳನ್ನು ಆಲಿಸುತ್ತಿರುವುದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು.
ಹುಬ್ಬಳ್ಳಿ-ಧಾರವಾಡ ಪೂರ್ವ ಮತಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರು ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು. ಮಳೆಗಾಲದಲ್ಲಿ ಮಾರುಕಟ್ಟೆ ಪರಿಸ್ಥಿತಿ ಹದಗೆಟ್ಟಿರುವುದನ್ನು ಕಣ್ಣಾರೆ ಕಂಡಿರುವ ಜಿಲ್ಲಾಧಿಕಾರಿಗಳು, ಆದಷ್ಟು ಬೇಗ ಅತ್ಯಾಧುನಿಕ ಮೂಲಭೂತ ಸೌಕರ್ಯವಿರುವ ಮಾರುಕಟ್ಟೆ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು.

loading...