ಶಾರ್ಟ್‌​ ಸಕ್ರ್ಯೊಟ್‌: ಯೋಧ ಸಾವು

0
12
loading...

ಕನ್ನಡಮ್ಮ ಸುದ್ದಿ-ಹುಬ್ಬಳ್ಳಿ: ಕುಂದಗೋಳ ತಾಲೂಕು ಯೋಧ ಶಾರ್ಟ್‌​ ಸಕ್ರ್ಯೊಟ್‌ನಿಂದಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಮೃತಪಟ್ಟಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹೊಸಕಟ್ಟಿ ಗ್ರಾಮದ ಯೋಧ ರಮೇಶ್‌ ಸಿ. ನರಗುಂದ ಮೃತಪಟ್ಟವರು. ಇವರು 10 ವರ್ಷಗಳ ಹಿಂದೆ ಸೇನೆಗೆ ಸೇರಿದ್ದರು. ಎಲೆಕ್ಟ್ರೀಷಿಯನ್‌​ ಆಗಿ ಕೆಲಸ ಮಾಡುತ್ತಿದ್ದ ಅವರು ಜಮ್ಮು ಮತ್ತು ಕಾಶ್ಮೀರದ ಕ್ಯಾಂಪ್‌​ನಲ್ಲಿ ಮಂಗಳವಾರ ಮಧ್ಯಾಹ್ನ ಕೆಲಸ ಮಾಡುವಾಗ ವಿದ್ಯುತ್‌​ ಆಘಾತದಿಂದ ಮೃತಪಟ್ಟಿದ್ದಾರೆ. ಮೃತ ಯೋಧನ ಪಾರ್ಥಿವ ಶರೀರ ಗುರುವಾರ ಸ್ವಗ್ರಾಮಕ್ಕೆ ಆಗಮಿಸಲಿದ್ದು, ಗ್ರಾಮದಲ್ಲೆ ಮೃತ ಯೋಧನ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ತಿಳಿದು ಬಂದಿದೆ. ಯೋಧನ ನಿಧನದಿಂದ ಗ್ರಾಮದಲ್ಲಿ ಶೋಕದ ವಾತಾವರಣ ಮಡುಗಟ್ಟಿದೆ.

loading...