ಶಾಸಕನ ಬೆಂಗಲಿಗರ ಹಲ್ಲೆ;ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

0
7
loading...

ಬೆಂಗಳೂರು:ಮಂಡ್ಯ ಜಿಲ್ಲೆಯ ಶಾಸಕರೊಬ್ಬರ ವಿರುದ್ಧ ಮಾತನಾಡಿದ್ದ ಎನ್ನಲಾದ ಯುವಕನ ಮೇಲೆ ಕೆಲವರು ಹಲ್ಲೆ ನಡೆಸಿದ್ದು, ಆತ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗೊಬ್ಬರಗಾಲ ಗ್ರಾಮದಲ್ಲಿ ನಡೆದಿದೆ.
ಗೊಬ್ಬರಗಾಲದ ಗ್ರಾಮದ ನಾಗೇಂದ್ರ(28) ಎಂಬಾತ ಮೃತ ಯುವಕ. ದಿಲೀಪ್, ಶೀಧರ, ಸೇರಿದಂತೆ ಹಲವರು ಹಲ್ಲೆ ನಡೆಸಿದ ಆರೋಪಿಗಳೆಂದು ತಿಳಿದುಬಂದಿದೆ. ಹಲ್ಲೆ ನಡೆಸಿದವರು ಶಾಸಕರೊಬ್ಬರ ಬೆಂಬಲಿಗರು ಎನ್ನಲಾಗ್ತಿದೆ.
ನಿನ್ನೆ ರಾತ್ರಿ ಶಾಸಕನ ಬೆಂಗಲಿಗರು ಹಲ್ಲೆ ನಡೆಸಿದ್ದರಿಂದ ಮನನೊಂದು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾನೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಮಿಮ್ಸ್ ಆಸ್ಪತ್ರೆಗೆ ರಾತ್ರಿ ರವಾನಿಸಲಾಗಿದೆ.
ಯುವಕನ ಸಾವಿನಿಂದ ಗೊಬ್ಬರಗಾಲ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು,ಗ್ರಾಮಕ್ಕೆ 1 ಡಿ.ಆರ್. ಪೊಲೀಸ್ ತುಕಡಿಯನ್ನು ನಿಯೋಜಿಸಲಾಗಿದೆ.ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಆತ್ಮಹತ್ಯೆಗೆ ಪ್ರಚೋದನೆ ಯಡಿ ಐಪಿಎಸ್ ಸೆಕ್ಷನ್ 306 ಅಡಿಯಲ್ಲಿ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಇನ್ನು ಆತ್ಮಹತ್ಯೆ ಮಾಡಿಕೊಂಡಿರುವ ಶ್ರೀರಂಗಪಟ್ಟಣ ತಾಲೂಕಿನ ಗೊಬ್ಬರಗಾಲ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ನಾಗೇಂದ್ರ ಮೃತದೇಹವನ್ನು, ನಗರದ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಇಲ್ಲಿಗೆ ಇಂದು ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಆಸ್ಪತ್ರೆಗೆ ಭೇಟಿ ನೀಡಿ ಘಟನೆ ವಿವರ ಪಡೆದಿದ್ದಾರೆ.
ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಆಸ್ಪತ್ರೆಯ ಶವಗಾರಕ್ಕೆ ಆಗಮಿಸಿದ್ದು,ಘಟನೆ ವಿವರ ಪಡೆದರು. ಬಳಿಕ ಮಾತನಾಡಿದ ಅವರು,15 ವರ್ಷಗಳಲ್ಲಿ ಇಂತಹ ಘಟನೆ ಜಿಲ್ಲೆಯಲ್ಲಿ ನಡೆದಿರಲಿಲ್ಲ.ಈ ಪ್ರಕರಣ ಬಗ್ಗೆ ನಿಸ್ಪಕ್ಷಪಾತವಾಗಿ ತನಿಖೆ ಆಗಬೇಕು. ಇನ್ಮುಂದೆ ಕ್ಷೇತ್ರದಲ್ಲಿ ಇಂತಹ ಘಟನೆ ನಡೆಯದಂತೆ ನೋಡಿಕೊಳ್ಳಬೇಕು. ಮೂರು ತಿಂಗಳಲ್ಲಿ ಇದು ಏಳನೇ ಪ್ರಕರಣವಾಗಿದೆ. ಇದು ಹೀಗೆ ಮುಂದುವರೆದರೆ ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.
ನಿನ್ನೆ ರಾತ್ರಿ ಶಾಸಕರೊಬ್ಬರ ಬೆಂಗಲಿಗರು ನಾಗೇಂದ್ರ ಮೇಲೆ ಹಲ್ಲೆ ಮಾಡಿದ್ದರು.ಇದರಿಂದ ಮನನೊಂದ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಂತರ ಮೃತದೇಹವನ್ನು ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು.

loading...