ಶಿಷ್ಟಾಚಾರ ಪಾಲಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸೂಚನೆ

0
5
loading...

ಕನ್ನಡಮ್ಮ ಸುದ್ದಿ-ಧಾರವಾಡ: ನ್ಯಾಯಾಲಯ ಸಂಕೀರ್ಣದ ಉದ್ಘಾಟನೆ ಕಾರ್ಯಕ್ರಮವು ಹುಬ್ಬಳ್ಳಿಯಲ್ಲಿ ಜರುಗಲಿದ್ದು ರಾಷ್ಟ್ರದ ಗಣ್ಯಾತೀಗಣ್ಯರು, ರಾಜ್ಯದ ಮುಖ್ಯಮಂತ್ರಿಗಳು ಪಾಲ್ಗೊಳ್ಳುತ್ತಿದ್ದು, ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು ಮತ್ತು ಕಟ್ಟುನಿಟ್ಟಾಗಿ ಶಿಷ್ಟಚಾರ ಪಾಲಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ  ಎಂ. ದೀಪಾ ಹೇಳಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲಾಡಳಿತವು ನ್ಯಾಯಾಂಗದ ಅಧಿಕಾರಿಗಳೊಂದಿಗೆ ಅನೇಕ ಸಭೆ ನಡೆಸಿದೆ. ವಿವಿಧ ಇಲಾಖೆಯ ಸಿಬ್ಬಂದಿಗಳನ್ನು ನಿಯೋಜಿಸಿ ವಸತಿ, ವೇದಿಕೆ, ಸಾರಿಗೆ, ಭದ್ರತೆ ಶಿಷ್ಟಾಚಾರ ಪಾಲನೆಯಂತಹ ಸಮಿತಿಗಳನ್ನು ಈಗಾಗಲೇ ರಚಿಸಲಾಗಿದೆ. ತಮಗೆ ವಹಿಸಿದ ಕರ್ತವ್ಯಗಳನ್ನು ಜಾಗೃತಿಯಿಂದ ಅಧಿಕಾರಿಗಳು ನಿರ್ವಹಿಸಬೇಕೆಂದರು. ನಗರ ಪೊಲೀಸ್ ಉಪ ಆಯುಕ್ತರಾದ ಶ್ರೀಮತಿ ರೇಣುಕಾ ಸುಕುಮಾರನ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ಸ್ನೇಹಲ್. ಆರ್. ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ ಮತ್ತು ಉಪವಿಭಾಗಾಧಿಕಾರಿ ಮೊಹಮ್ಮದ ಜುಬೇರ್ ವೇದಿಕೆಯಲ್ಲಿದ್ದರು.

loading...