ಸಂತ್ರಸ್ಥರಿಗೆ ಮಹಿಳೆಯರಿಗೆ ತಕ್ಷಣ ಸ್ಪಂದಿಸಿ: ನಾಗಲಕ್ಷಿö್ಮ ಬಾಯಿ

0
6
loading...

ವಿಜಯಪುರ: ಕೌಟುಂಬಿಕ ದೌರ್ಜನ್ಯ ಸೇರಿದಂತೆ ವಿವಿಧ ದೌರ್ಜನ್ಯಗಳಿಂದ ನೊಂದು ಪೋಲಿಸ್ ಠಾಣೆಗೆ ಬರುವ ಮಹಿಳಾ ಸಂತ್ರಸ್ಥರಿಗೆ ತಕ್ಷಣ ಸ್ಪಂದಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷಿö್ಮ ಬಾಯಿ ಅವರು ಪೋಲಿಸ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ವ್ಯಾಪ್ತಿಯ ಮಹಿಳಾ ಸಮಸ್ಯೆಗಳ ಬಗ್ಗೆ ಸಭೆ ನಡೆಸಿದ ಅವರು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಹೊಂದಿರುವ ಪೋಲಿಸ್ ಇಲಾಖೆ ಮೂಲಕ ದೌರ್ಜನ್ಯಕ್ಕೊಳಗಾಗಿ ಠಾಣೆಗೆ ಆಗಮಿಸುವ ಮಹಿಳಾ ಸಂತ್ರಸ್ಥರಿಗೆ ಸಕಾಲಕ್ಕೆ ಸ್ಪಂದಿಸುವ ಜೊತೆಗೆ ಅವರ ಸಮಸ್ಯೆಗಳನ್ನು ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಕೌಟುಂಬಿಕ ದೌರ್ಜನ್ಯಗಳು, ಮಹಿಳೆಯರು ಮತ್ತು ಮಕ್ಕಳ ಕಾಣೆಯಾಗುವಂತಹ ಪ್ರಕರಣಗಳಿಗೆ ವಿಶೇಷ ಗಮನ ನೀಡಬೇಕು. ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಪಟ್ಟಂತೆ ದೂರು ಸಲ್ಲಿಸಲು ಅವಕಾಶ ಇರುವ ಬಗ್ಗೆ ಮತ್ತು ಪೊಲಿಸ್‌ರಿಂದ ಇರುವ ರಕ್ಷಣೆ ಸೇರಿದಂತೆ ಇತರೆ ಸವಲತ್ತುಗಳ ಬಗ್ಗೆ ಬಾಲಕಿಯರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಪೋಕ್ಸೊÃ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳು ಸೇರಿದಂತೆ ಕೊಲೆ, ವರದಕ್ಷಿಣೆ ಕಿರುಕುಳ ಕೌಟುಂಬಿಕ ಹಿಂಸೆ, ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ಹಾಗೂ ಭ್ರೂಣ ಹತ್ಯೆ, ಇನ್ನಿತರ ಸಮಸ್ಯೆಗಳ ಬಗ್ಗೆ ಸರ್ಕಾರಿ ಇಲಾಖೆಗಳ ಸಂಬಂಧಪಟ್ಟ ಇಲಾಖೆಗಳು ಸೂಕ್ತ ನಿಗಾ ವಹಿಸಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ವಿವಿಧ ಇಲಾಖೆಗಳೊಂದಿಗೆ ಸೂಕ್ತ ಸಮನ್ವಯತೆ ಸಾಧಿಸಿ ಮಹಿಳೆಯರ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ ಸ್ಪಂದಿಸುವಂತೆ ಸೂಚನೆ ನೀಡಿ, ಜಿಲ್ಲೆಯಲ್ಲಿ ಬಹುಪತ್ನಿತ್ವ ಹಾಗೂ ಬಾಲ್ಯವಿವಾಹ ಪ್ರಕರಣಗಳ ಬಗ್ಗೆಯೂ ನಿಗಾ ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ಮಾತನಾಡಿ, ಜಿಲ್ಲೆಯ ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿ ಮಹಿಳೆಯರಿಗಾಗಿ ಹೆಲ್ಪಡೆಸ್ಕ್ ಸ್ಥಾಪಿಸಲಾಗಿದೆ. ಮಹಿಳೆಯರ ಪ್ರಕರಣಗಳಿಗೆ ಸಕಾಲಕ್ಕೆ ಸ್ಪಂದಿಸಲಾಗುತ್ತಿದ್ದು, ಪೊಲೀಸ್ ಸಿಬ್ಬಂದಿಗಳಿಗೆ ಈಗಾಗಲೇ ತರಬೇತಿ ನೀಡಿ, ಮಹಿಳೆಯರ ಸಮಸ್ಯೆಗಳ ಇತ್ಯರ್ಥಕ್ಕೆ ವಿಶೇಷ ಗಮನ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

loading...