ಸಚಿವರಿಂದ ವಿವಿಧ ಕಾಮಗಾರಿ ಪರಿಶೀಲನೆ

0
5
loading...

ಕನ್ನಡಮ್ಮ ಸುದ್ದಿ-ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳ ಸ್ಥಿತಿಗತಿ, ಸ್ಮಾರ್ಟ್ ಸಿಟಿ ಯೋಜನೆಯ ಅನುಷ್ಠಾನ, ಒಳ ಚರಂಡಿ ಮತ್ತು ಕುಡಿಯುವ ನೀರಿನ ಯೋಜನೆ ಸೇರಿದಂತೆ ಇನ್ನಿತರೆ ಯೋಜನೆಗಳ ಬಗ್ಗೆ ಹಾಗೂ ಪಾಲಿಕೆಯ ಪೌರ ಕಾರ್ಮಿಕರ ಸಮಸ್ಯೆ ನಿವಾರಣೆ ಬಗ್ಗೆ ಇಂದು ಮಾನ್ಯ ನಗರಾಭಿವೃದ್ಧಿ ಹಾಗೂ ವಸತಿ ಇಲಾಖೆ ಸಚಿವ ಯು.ಟಿ. ಖಾದರ್ ಅವರು ಪಾಲಿಕೆಯ ಎಲ್ಲ ಸದಸ್ಯರೊಂದಿಗೆ ಡೆನಿಸನ್ಸ್ ಹೋಟೆಲ್‍ನಲ್ಲಿ ಸಭೆ ನಡೆಸಿದರು. ಶಾಸಕ ಪ್ರಸಾದ ಅಬ್ಬಯ್ಯ, ಆಯುಕ್ತ ಶಕೀಲ ಅಹ್ಮದ್ ಇನ್ನಿತರರಿದ್ದರು.

loading...