ಹೊತ್ತುರಿಯದ ಪ್ರತ್ಯೇಕ ರಾಜ್ಯದ ಕಿಡಿ, ಹುಬ್ಬಳ್ಳಿಯಲ್ಲಿ ಸಂಪೋರ್ಣವಾಗಿ ಕಮರಿದ ಬೆಂಬಲ!

0
10
loading...

ಕನ್ನಡಮ್ಮ ಸುದ್ದಿ-ಹುಬ್ಬಳ್ಳಿ: ವಾಣಿಜ್ಯ ನಗರದಲ್ಲಿ ಸಂಪೋರ್ಣವಾಗಿ ಕಮರಿದ ಪ್ರತ್ಯೇಕ ರಾಜ್ಯದ ಕಿಡಿ ಹುಬ್ಬಳ್ಳಿಯಲ್ಲಿ ಪ್ರತ್ಯೇಕ ರಾಜ್ಯ ಹೋರಾಟಗಾರರಿಗೆ ದೊರೆಯದ ಬೆಂಬಲ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಬಂದ್ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಯಾವುದೇ ಕನ್ನಡ ಪರ ಸಂಘಟನೆಗಳು ಬಂದ್ಗೆ ಬೆಂಬಲ ವ್ಯಕ್ತಪಡಿಸಿಲ್ಲ.
ನಮ್ಮ ಬೆಂಬಲ ಉತ್ತರ ಕರ್ನಾಟಕ ಅಭಿವೃದ್ಧಿಯ ಹೋರಾಟಕ್ಕೇ ಹೊರತು ಪ್ರತ್ಯೇಕ ರಾಜ್ಯಕ್ಕಲ್ಲ ಎಂದ ವಿವಿಧ ಸಂಘಟನೆಗಳು, ರಾಜ್ಯ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ಕಡೆಗಣಿಸಿದ್ದನ್ನು ವಿರೋಧಿಸಿ ನಡೆಸಲು ಉದ್ದೇಶಿಸಿದ್ದ ಬಂದ್‍ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿ ತೋರಿತು. ಉತ್ತರ ಕರ್ನಾಟಕ ವಿಚಾರದಲ್ಲಿ ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಉತ್ತರ ಕರ್ನಾಟಕ ಭಾಗದ 13 ಜಿಲ್ಲೆಗಳ ವ್ಯಾಪ್ತಿಯಲ್ಲಿ ಗುರುವಾರ ಬಂದ್‍ಗೆ ಕರೆ ನೀಡಲಾಗಿದೆಯಾದರೂ, ಜಿಲ್ಲೆಯ ತಾಲ್ಲೂಕುಗಳಲ್ಲಿ ಬಂದ್‍ಗೆ ಬೆಂಬಲ ವ್ಯಕ್ತವಾಗಿಲ್ಲ.
ಉತ್ತರ ಕರ್ನಾಟಕದ ಹುಬ್ಬಳ್ಳಿ- ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ, ವಿಜಯಪುರ, ಬಾಗಲಕೋಟೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಪ್ರಮುಖ ಸಂಘಟನೆಗಳು ಬಂದ್‍ನಿಂದ ದೂರ ಸರಿದಿವೆ ಎಂಬ ಹಿನ್ನೆಲೆಯಲ್ಲಿ ನಗರದಲ್ಲಿ ನೀರವ ಪ್ರದರ್ಶನ ಕಂಡು ಬಂದಿದೆ. ಆದರೆ ಕೇಲ ಸಂಘಟನೇಗಳು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಿರುವುದು ಕಂಡು ಬಂದಿತು. ಈ ಯಾವ ಜಿಲ್ಲೆಗಳಲ್ಲೂ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆ ಭಾಗದ ಜಿಲ್ಲೆಗಳಲ್ಲಿ ಜನಜೀವನ ಎಂದಿನಂತೆ ಮುಂದುವರೆದಿದೆ.
ಬಂದ್‍ಗೆ ಕರೆ ನೀಡಿದ್ದ ಸಂಘಟನೆಗಳ ನಡುವೆಯೇ ಒಡಕು ಕಾಣಿಸಿಕೊಂಡಿದ್ದು, 13 ಜಿಲ್ಲೆಗಳಲ್ಲಿ ಹೋರಾಟ ನಡೆಸುವ ತೀರ್ಮಾನ ಬೆಂಬಲಿಸಿದ್ದ ಬಹುತೇಕ ಸಂಘಟನೆಗಳು ಬಂದ್‍ಗೆ ಬೆಂಬಲಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದವು. ಆ ಮೂಲಕ ನಮ್ಮ ಬೆಂಬಲ ಉತ್ತರ ಕರ್ನಾಟಕ ಅಭಿವೃದ್ಧಿಯ ಹೋರಾಟಕ್ಕೇ ಹೊರತು ಪ್ರತ್ಯೇಕ ರಾಜ್ಯಕ್ಕಲ್ಲ ಎಂಬ ಸಂದೇಶ ರವಾನಿಸಿದರು. ಹದಿನೈದು ದಿನಗಳ ಒಳಗಾಗಿ ಸಭೆ ಕರೆದು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಚರ್ಚಿಸುವುದಾಗಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಬುಧವಾರ ಭರವಸೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಮಾತನಾಡಿದ್ದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಸೋಮಶೇಖರ ಕೊತಂಬರಿ ಗುರುವಾರ ಕರೆ ನೀಡಿದ್ದ ಬಂದ್ ಹಿಂಪಡೆಯಲಾಗಿದೆ ಎಂದು ತಿಳಿಸಿದ್ದರು. ಆದರೆ, ಯಾವುದೇ ಕಾರಣಕ್ಕೂ ಬಂದ್ ಹಿಂಪಡೆಯುವುದಿಲ್ಲ ಎಂದು ಉತ್ತರ ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಸವರಾಜ ಕರಿಗಾರ ಹುಬ್ಬಳ್ಳಿಯಲ್ಲಿ ಬುಧವಾರ ಸ್ಪಷ್ಟಪಡಿಸಿದ್ದರು. ಇವರಿಗೆ ಕೈ ಜೋಡಿಸಿದ್ದ ಇನ್ನೂ ಕೆಲ ಸಂಘಟನೆಗಳು ಕೂಡ ಸಿಎಂ ಏನೇ ಭರವಸೆ ನೀಡಿದರೂ ಬಂದ್ ಕರೆ ಹಿಂಪಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದವು. ಮತ್ತೆ ಕೆಲವು ಸಂಘಟನೆಗಳು ಬಂದ್ ಬದಲು ಸಾಂಕೇತಿಕವಾಗಿ ಧರಣಿ ನಡೆಸಿ ಉತ್ತರ ಕರ್ನಾಟಕಕ್ಕಾಗಿರುವ ಅನ್ಯಾಯ ಸರಿಪಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಹೇಳಿವೆ. ಕೇವಲ ಉತ್ತರ ಕರ್ನಾಟಕ ರೈತ ಸಂಘದಿಂದ ಮಾತ್ರ ಬಂದ್‍ಗೆ ಬೆಂಬಲ ವ್ಯಕ್ತವಾಗಿದೆ. ಹೀಗಾಗಿ ನಗರಿಯಲ್ಲಿ ಕಾಣಸಿಗದ ಬಂದ್ ಛಾಯೆ ಎಂದಿನಂತೆ ಅಂಗಡಿ ಮುಂಗಟ್ಟುಗಳು ತೆರೆದಿವೆ, ವಾಹನ, ಬಸ್ ಸಂಚಾರ ಜನ ಸಂಧನಿಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ ಕೇಲ ರೈತ ಸಂಘದಿಂದ ಸಾಂಕೇತಿಕ ಪ್ರತಿಭಟನೆ ನಡೆಯಿತು. ನಗರದ ಚನ್ನಮ್ಮ ವೃತ್ತದಲ್ಲಿ ಕೆಲ ರೈತ ಪರ ಸಂಘಟನೆಗಳು ಸರ್ಕಾರದ ವಿರುದ್ಧ ಪ್ರತ್ಯೇಕ ರಾಜ್ಯದ ವಿಷಯ ಮುಂದಿಟ್ಟುಕೊಂಡು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

loading...