ಹೋರಾಟ ಹಿಂಪಡೆಯುವ ಮಾತೇ ಇಲ್ಲ: ಮಂಜುನಾಥ

0
3
loading...

ಕನ್ನಡಮ್ಮ ಸುದ್ದಿ-ಹುಬ್ಬಳ್ಳಿ: ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕೆಂದು ಆಗ್ರಹಿಸಿ ಇಂದು ಬಂದ್‍ಗೆ ಕರೆ ನೀಡಲಾಗಿದ್ದು, ಅದನ್ನು ಹಿಂಪಡೆಯುವುದಿಲ್ಲ ಎಂದು ಪ್ರತ್ಯೇಕ ಉತ್ತರ ಕರ್ನಾಟಕ ಹೋರಾಟ ಸಮಿತಿ ಸಂಚಾಲಕ ಮಂಜುನಾಥ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಮಲತಾಯಿ ಧೋರಣೆಯನ್ನು ಖಂಡಿಸಿ, ಆ. 2 ರಂದು ಸ್ವಯಂಪ್ರೇರಿತವಾಗಿ ಬಂದ್‍ಗೆ ಕರೆ ನೀಡಲಾಗಿದೆ. ಈಗಾಗಲೇ ಕೆಲವು ಸಂಘಟನೆಗಳು ಬಂದ್‍ಗೆ ಬೆಂಬಲ ಸೂಚಿಸಿವೆ. ಕೆಲವು ಸಂಘಟನೆಗಳು ಬಂದ್‍ಗೆ ಬೆಂಬಲ ನೀಡಿಲ್ಲ. ಬಂದ್‍ಗೆ ಬೆಂಬಲ ನೀಡುವುದು ಬಿಡುವುದು ಆಯಾ ಸಂಘಟನೆಗಳಿಗೆ ಬಿಟ್ಟ ವಿಚಾರ. ಆದರೆ, ಉತ್ತರ ಕರ್ನಾಟಕ ರೈತ ಸಂಘ ಹಾಗೂ ಪ್ರತ್ಯೇಕ ಉತ್ತರ ಕರ್ನಾಟಕ ಹೋರಾಟ ಸಮಿತಿ ಬಂದ್ ನಡೆಸಲಿದೆ ಎಂದು ಸ್ಪಷ್ಟಪಡಿಸಿದರು. ಇದೊಂದು ಸ್ವಯಂಪ್ರೇರಿತವಾದ ಬಂದ್ ಆಗಿದ್ದು, ಅಂಗಡಿ ಮುಗ್ಗಟ್ಟುಗಳನ್ನು ಯಾರೂ ಒತ್ತಾಯಪೂರ್ವಕವಾಗಿ ಬಂದ್ ಮಾಡಿಸುವುದಿಲ್ಲ. ಆದರೆ ಅವರೇ ಸ್ವಯಂಪೋರ್ಣವಾಗಿ ಅಂಗಡಿಗಳನ್ನು ಮುಚ್ಚಿ ಬೆಂಬಲ ಸೂಚಿಸಲಿದ್ದಾರೆ ಎಂದರು.

loading...