೭೨ನೇ ಸ್ವಾತಂತ್ರೊö್ಯÃತ್ಸವ ಅದ್ದೂರಿ ಆಚರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ

0
30
loading...

ಕನ್ನಡಮ್ಮ ಸುದ್ದಿ-ಕಾರವಾರ: ೭೨ನೇ ಸ್ವಾತಂತ್ರೊö್ಯÃತ್ಸವವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಷ್ಟಿçÃಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ೭೨ನೇ ಸ್ವಾತಂತ್ರೊö್ಯÃತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಹಲವಾರು ಸ್ವಾತಂತ್ರö್ಯ ಸೇನಾನಿಗಳ ತ್ಯಾಗ ಬಲಿದಾನದಿಂದ ಸಿಕ್ಕಿರುವ ಭಾರತ ಸ್ವಾತಂತ್ರö್ಯ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ ೧೫ರಂದು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಎಲ್ಲ ಅಧಿಕಾರಿಗಳಿಗೆ ಸೂಚಿಸಿದರು. ಅ. ೧೫ರಂದು ಶಿಷ್ಟಾಚಾರದಂತೆ ಕಾರ್ಯಕ್ರಮಗಳು ನಡೆಯಲಿದ್ದು ಬೆಳಿಗ್ಗೆ ೭.೧೫ಕ್ಕೆ ಜಿಲ್ಲಾಧಿಕಾರಿಗಳ ನಿವಾಸ, ೭.೩೦ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಾಗೂ ವಿವಿಧ ಇಲಾಖೆ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸುವುದು. ಬೆಳಿಗ್ಗೆ ೯ಗಂಟೆಗೆ ಸರಿಯಾಗಿ ಜಿಲ್ಲಾ ಉಸ್ತುವಾರಿ ಸಚಿವರು ಪೊಲೀಸ್ ಕವಾಯತು ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರೊö್ಯÃತ್ಸವದ ಸಂದೇಶ ಕೊಡಲಿದ್ದಾರೆ. ನಂತರ ಪಥಸಂಚಲನ, ವಿದ್ಯಾರ್ಥಿಗಳಿಂದ ಸ್ವಾತಂತ್ರೊö್ಯÃತ್ಸವ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು. ಸ್ವಾತಂತ್ರö್ಯ ದಿನಾಚರಣೆ ಅಂಗವಾಗಿ ನಗರವನ್ನು ಸಂಪೂರ್ಣವಾಗಿ ಸ್ವಚ್ಚವಾಗಿಡಬೇಕು ಅಲ್ಲದೆ ಇಡೀ ನಗರದಲ್ಲಿ ಹಬ್ಬದ ವಾತಾವರಣ ಇರಬೇಕು ಇದಕ್ಕೆ ನಾಗರಿಕರು ಸಹಕಾರ ಮಾಡಬೇಕು. ಅಲ್ಲದೆ ನಗರದ ಎಲ್ಲ ಸರ್ಕಾರಿ ಕಚೇರಿಗಳು ಹಾಗೂ ವಿವಿಧ ವೃತ್ತಗಳನ್ನು ದೀಪಾಲಂಕಾರ ಮಾಡಬೇಕು ಎಂದರು. ಈ ಬಾರಿಯೂ ಪ್ಲಾಸ್ಟಿಕ್ ಬಾವುಟ ಸಂಪೂರ್ಣ ನಿಷೇಧಿಸಿದ್ದು ಸರ್ಕಾರಿ ಇಲಾಖೆಗಳ ಕಚೇರಿಗಳ ಸ್ವಚ್ಚತೆ ಆಗಬೇಕು. ಈ ಸಂಬಂಧ ಆಗಸ್ಟ್ ೨೦ರಂದು ಖುದ್ದು ದಿಢೀರ್ ಭೇಟಿ ಮಾಡಿ ಕಚೇರಿಗಳ ಪರಿಶೀಲನೆ ಮಾಡಲಾಗುವುದು ಎಂದು ಅವರು ಹೇಳಿದರು. ಎಲ್ಲ ಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಈ ಬಗ್ಗೆ ಅವರ ಹಾಜರಾತಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕು ಎಂದು ಅವರು ಹೇಳಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿನಾಯಕ ವಿ.ಪಾಟೀಲ್, ಅಪರ ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ್ ಉಪಸ್ಥಿತರಿದ್ದರು.

loading...