20 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

0
16
loading...

ಬೆಂಗಳೂರು:ಕಳೆದ ಕೆಲವು ದಿನಗಳಿಂದ ಕೊಡಗು ಸೇರಿದಂತೆ ಹಲವು ಕಡೆ ವರುಣನ ಆರ್ಭಟ ಜೋರಾಗಿದ್ದು, ಕೆಆರ್‍ಎಸ್ ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನೀರನ್ನು ನದಿಗೆ ಹರಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
ಮಳೆ ಅಧಿಕವಾದ ಹಿನ್ನೆಲೆಯಲ್ಲಿ ಕೆಆರ್‍ಎಸ್ ಜಲಾಶಯದ ಮಟ್ಟ ಹೆಚ್ಚಾಗಿದೆ. ಹೀಗಾಗಿ ಜಲಾಶಯದಿಂದ ಭದ್ರತಾ ದೃಷ್ಟಿಯಿಂದ ಸುಮಾರು 20 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆಗೆ ಅಧಿಕಾರಿಗಳು ನಿರ್ಧರಿಸಿದ್ದಾರೆ.
ಮಳೆ ಅಬ್ಬರದಿಂದ ಪ್ರವಾಹದ ಭೀತಿ ಎದುರಾಗಿದೆ. ಆದ್ದರಿಂದ ಜಲಾಶಯದ ಕೆಳ ಭಾಗದಲ್ಲಿ ವಾಸಿಸುತ್ತಿರುವ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ.

loading...