ಎಡದಂಡೆ ಕಾಲುವೆಗಳಿಗೆ ನೀರು ಹರಿಸುವಂತೆ ಒತ್ತಾಯ

0
0
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ಮಲಪ್ರಭಾ ನದಿ ಹಾಗೂ ಎಡದಂಡೆ ಕಾಲುವೆಗಳಿಗೆ ನೀರು ಹರಿಸುವಂತೆ ಶಾಸಕ ಮಹಾದೇವ ಎಸ್. ಯಾದವಾಡ ಅವರು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಗುರುವಾರ ಮನವಿ ಸಲ್ಲಿಸಿದರು.
ರಾಮದುರ್ಗ ತಾಲೂಕಿನಲ್ಲಿ ಪ್ರಸಕ್ತ ಋತುವಿನಲ್ಲಿ ನಿಗಧಿತ ಪ್ರಮಾಣದಲ್ಲಿ ಮಳೆಯಾಗದೇ ಅಂತರ್ಜಲ ಮಟ್ಟ ಕುಸಿದ, ತಾಲೂಕಿನ ಬಹುತೇಕ ಕೊಳವೆಭಾವಿಗಳು ಬತ್ತಿ ಹೋಗುತ್ತಿವೆ. ಇದರಿಂದ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗುತ್ತಿದೆ. ಆದ್ದರಿಂದ ರಾಮದುರ್ಗ ತಾಲೂಕಿನ ಮಲಪ್ರಭಾ ನದಿ ಹಾಗೂ ಎಡದಂಡೆ ಕಾಳುವೆಗಳಿಗೆ ನೀರು ಹರಿಸುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.

loading...