ಕೊಡಗು, ಕೇರಳ ಸಂತ್ರಸ್ತರಿಗೆ ಪರಿಹಾರ ನಿಧಿ ಸಂಗ್ರಹ

0
0
loading...

ಜಮಖಂಡಿ: ಕೊಡಗು ಹಾಗೂ ನೆರೆ ರಾಜ್ಯ ಕೇರಳದಲ್ಲಿ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಹಲವಾರು ಜನರು ತಮ್ಮ ಆಸ್ತಿ-ಅಂತಸ್ತನ್ನು ಕಳೆದುಕೊಂಡು ಸಂತ್ರಸ್ಥರಾದ ಹಿನ್ನಲೆಯಲ್ಲಿ ಅವರಿಗೆ ಸಹಾಯಾರ್ಥವಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹುನ್ನೂರಿನ ಸ್ಕೌಟ್ಸ ಮತ್ತು ಗೈಡ್ಸ್ ಹಾಗೂ ಸಮಾಜಕಾರ್ಯ ವಿಭಾಗಗಳು ಜಂಟಿಯಾಗಿ ಪರಿಹಾರ ನಿಧಿ ಸಂಗ್ರಹ ಕಾರ್ಯವನ್ನು ಹಮ್ಮಿಕೊಂಡಿತು.
ಈ ಸಹಾಯ ನಿಧಿ ಜಾಥಾ ಕಾರ್ಯಕ್ರಮಕ್ಕೆ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಸುನಂದಾ ಎಸ್ ಶಿರೂರ ಅವರು ಧನ ಸಹಾಯ ನೀಡುವ ಮೂಲಕ ಚಾಲನೆ ನೀಡಿದರು. ವಿದ್ಯಾರ್ಥಿಗಳು ಹುನ್ನೂರಿನ ಬೀದಿ-ಬೀದಿಗಳಲ್ಲಿ ಸಂಚರಿಸಿ ಒಟ್ಟು ೧೧,೯೦೫ ರೂಪಾಯಿಗಳನ್ನು ಸಂಗ್ರಹಿಸಿ ಮುಖ್ಯಮಂತ್ರಿ ಪರಿಹಾರ ನಿಧಿ ಹಾಗೂ ಕರ್ನಾಟಕ ರಾಜ್ಯ ಸ್ಕೌಟ್ ಘಟಕಕ್ಕೆ ಕಳುಹಿಸಿಕೊಡಲಾಯಿತು.

ಸಹಾಯ ನಿಧಿ ಸಂಗ್ರಹಣೆ ಕಾರ್ಯದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಚಾಲಕ ಡಾ. ವಾಯ್.ವಾಯ್.ಕೊಕ್ಕನವರ, ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಡಾ. ಬನಶಂಕರಯ್ಯ ಎಂ. ಹಾಗೂ ಡಾ.ಸತೀಶಗೌಡ, ಪ್ರೊ. ಜೈಪ್ರಕಾಶ ಹಾಗೂ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

loading...