ಕೊಪ್ಪಳದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ

0
0
loading...

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಇರಬಹದು, ಆದರೆ ಗಂಗಾವತಿಯಲ್ಲಿ ಅದು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಹಾಗೂ ಹೈಕಮಾಂಡ್ ಉಸ್ತುವಾರಿ ಹೆಚ್.ಆರ್. ಶ್ರಿÃನಾಥ್ ಹೇಳಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಗಾವತಿ ನಗರಸಭೆ ಚುನಾವಣೆ ಫಲಿತಾಂಶ ಅತಂತ್ರವಾಗೋ ಸಾಧ್ಯತೆ ಇದೆ. ಅಧಿಕಾರ ಹಿಡಿಯುವಲ್ಲಿ ಜೆಡಿಎಸ್ ಪ್ರಮುಖ ಪಾತ್ರ ವಹಿಸಲಿದೆ. ಹೀಗಾಗಿ ನಾವು ಬಿಜೆಪಿ ಜೊತೆ ಒಪ್ಪಂದ ಮಾಡಿಕೊಂಡಿದ್ದೆÃವೆ. ಬಿಜೆಪಿ ಬೆಂಬಲ ಕೊಟ್ಟರೆ ನಾವು ಸ್ವಾಗತ ಮಾಡುತ್ತೆÃವೆ ಅವರ ಜೊತೆ ಕೈ ಜೋಡಿಸುತ್ತೆÃವೆ ಎಂದು ಅವರು ತಿಳಿಸಿದ್ದಾರೆ.
ಗಂಗಾವತಿಯಲ್ಲಿ ನಾವು ಇಕ್ಬಾಲ್ ಅನ್ಸಾರಿ ವಿರುದ್ಧ ಹೋರಾಟ ಮಾಡುತ್ತಿದ್ದೆÃವೆ. ಅನ್ಸಾರಿ ಕುಮಾರಸ್ವಾಮಿ ಅವರನ್ನು ನಾಯಕ ಎಂದು ಒಪ್ಪುದಿಲ್ಲವಂತೆ. ಈ ಕಾರಣಕ್ಕೆ ನಾವು ಯಾವತ್ತೂ ಕಾಂಗ್ರೆಸ್ ಜೊತೆ ಹೋಗಲ್ಲ ಎಂದಿದ್ದಾರೆ.
ಇದೇ ವೇಳೆ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಕೆ ಬಸವರಾಜ್ ಹಿಟ್ನಾಳ್ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿರುವುದಾಗಿ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ೫ ಕ್ಷೆÃತ್ರದಲ್ಲಿ, ಕೇವಲ ೨ ಕ್ಷೆÃತ್ರಗಳಳಲ್ಲಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ. ಈ ಕಾರಣಕ್ಕಾಗಿ ನಾನು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೆÃನೆ ಎಂದು ಹಿಟ್ನಾಳ್ ಪತ್ರದಲ್ಲಿ ತಿಳಿಸಿದ್ದಾರೆ. ಜೂನ್ ೭ ರಂದು ಹಿಟ್ನಾಳ್ ರಾಜೀನಾಮೆ ಸಲ್ಲಿಸಿದ್ದು, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಶಿವರಾಜ್ ತಂಗಡಗಿ ಹೆಸರು ಕೇಳಿ ಬರುತ್ತಿದೆ.

loading...