ಕ್ರೀಡಾಪಟುಗಳಿಗೆ ಸೂಕ್ತ ತರಬೇತಿ ನೀಡಿ: ದಿನಕರ

0
0
loading...

ಕನ್ನಡಮ್ಮ ಸುದ್ದಿ-ಕುಮಟಾ: ಜಗತ್ತಿನಲ್ಲಿ ಅತೀ ಹೆಚ್ಚಿನ ಜನಸಂಖ್ಯೆ ಹೊಂದಿರುವ ರಾಷ್ಟ್ರವಾದ ನಮ್ಮ ಭಾರತ ಕ್ರೀಡೆಯಲ್ಲಿ ಹಿಂದುಳಿದಿದೆ. ಚಿಕ್ಕಪುಟ್ಟ ರಾಷ್ಟ್ರಗಳು ಒಲಂಪಿಕ್ಸ್‌ನಲ್ಲಿ ಸಾಧನೆ ಮಾಡುತ್ತಿರುವುದನ್ನು ಗಮನಿಸಿದರೆ ನಮ್ಮ ದೇಶದವರಲ್ಲಿ ಯಾಕೆ ಸಾಧ್ಯವಿಲ್ಲ ಎಂಬ ಪ್ರಶ್ನೆ ಕಾಡುವಂತಾಗಿದೆ ಎಂದು ದಿನಕರ ಶೆಟ್ಟಿ ಬೇಸರ ವ್ಯಕ್ತಪಡಿಸಿದರು.
ಅವರು ಶನಿವಾರ ತಾಲೂಕಿನ ಕಡ್ಲೆಯ ಗಾಂಧೀ ವನ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ್‌, ಶಿಕ್ಷಣ ಇಲಾಖೆ ಮತ್ತು ಹೊಲನಗದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಕಾರದಲ್ಲಿ ನಡೆದ ತಾಲೂಕು ಮಟ್ಟದ 14 ವರ್ಷ ವಯೋಮಿತಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಡಕ್ಕೆ ಚಾಲನೆ ನೀಡಿ ಮಾತನಾಡಿ, ಚಿಕ್ಕ ಚಿಕ್ಕ ರಾಷ್ಟ್ರಗಳು ಒಲಂಪಿಕ್ಸ್‌ನಲ್ಲಿ ಹೆಚ್ಚೆಚ್ಚು ಚಿನ್ನದ ಪದಕ ಪಡೆಯುತ್ತಿದ್ದಾರೆ. ಆದರೆ ನಮ್ಮ ದೇಶದ ಕ್ರೀಡಾಪಟುಗಳು ಚಿನ್ನದ ಪದಕ ಪಡೆಯುವಲ್ಲಿ ತೀರಾ ಹಿಂದಿದೆ. ಸರ್ಕಾರ ಆ ನಿಟ್ಟಿನಲ್ಲಿ ಗಮನ ಹರಿಸಿ, ಕ್ರೀಡಾಪಟುಗಳಿಗೆ ಸೂಕ್ತ ತರಬೇತಿ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲಿ ಬಾಗವಹಿಸಿದ ಕ್ರೀಡಾ ಪಟುಗಳು ಕ್ರೀಡಾ ಮನೋಭಾವದಿಂದ ಸ್ಪರ್ಧಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರೆ. ಅಲ್ಲದೆ ಸರ್ಕಾರಿ ಕಾರ್ಯಕ್ರಮಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಗೈರಾಗಿರುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಾದ ಗಣಪತಿ ಡಿ ನಾಯ್ಕ, ಗೋಪಾಲ ಆಗೇರ್‌ ಅವರನ್ನು ಸನ್ಮಾನಿಸಲಾಯಿತು. ಹೊಲನಗದ್ದೆ ಗ್ರಾಪಂ ಅಧ್ಯಕ್ಷ ರಾಘವೇಂದ್ರ ಪಟಗಾರ, ಸದಸ್ಯರಾದ ರಾಮ ಮಡಿವಾಳ, ರಮ್ಯ ಶೇಟ್‌, ಡಯಟ್‌ ಪ್ರಾಂಶುಪಾಲ ಈಶ್ವರ ನಾಯ್ಕ, ಶಿಕ್ಷಕರ ಸಂಘದ ಅಧ್ಯಕ್ಷ ಆನಂದು ಗಾಂವ್ಕರ್‌, ಎಸ್‌ಡಿಎಂಸಿ ಅಧ್ಯಕ್ಷೆ ದೀಪಾ ಹಿಣಿ, ಪ್ರಮುಖರಾದ ಗಣಪತಿ ಮುಕ್ರಿ, ದೀಪಕ ನಾಯ್ಕ, ಬಿ ಜಿ ನಾಯ್ಕ ಹಾಗೂ ಮೊದಲಾದವರು ಉಪಸ್ಥಿತರಿದ್ದರು. ಎಸ್‌ ಎಸ್‌ ಭಟ್‌ ಸ್ವಾಗತಿಸಿದರು. ರವೀಂದ್ರ ಭಟ್‌ ಸೂರಿ ನಿರೂಪಿಸಿ, ವಂದಿಸಿದರು.
ಗಾಂಧೀ ವನದಲ್ಲಿ ಕ್ರೀಡಾಕೂಟವನ್ನು ಅಚ್ಚುಕಟ್ಟಾಗಿ ಸಂಘಟಿಸಲಾಗಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

loading...