ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

0
2
loading...

ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ :

ಕನ್ನಡಮ್ಮ ಸುದ್ದಿ-ಬೆಳಗಾವಿ: ಕೇಂದ್ರ ಸರಕಾರ ಬಡ ವರ್ಗದ ಮತ್ತು ಮದ್ಯಮ ವರ್ಗದ ಜನರ ಜೀವನದ ಜೊತೆ ಆಟವಾಡುತ್ತಿದ್ದು ದಿನ ನಿತ್ಯ ಬಳಕೆ ವಸ್ತಗಳಲ್ಲಿ ಒಂದಾದ ತೈಲ ಬೆಲೆಯನ್ನು ಗಗನಕ್ಕೆ ಏರಿಸಿದೆ ಎಂದು ಕೇಂದ್ರಸ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು .

ಬುಧವಾರ ನಗರದ ಚನ್ನಮ್ಮಾ ವೃತ್ತದಲ್ಲಿ ಜಮಾಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರಕಾರ ಮತ್ತು ಪ್ರದಾನಿ ಮೋದಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು .ಕೇಂದ್ರ ಸರಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ ಮಾಡುವಲ್ಲಿ ವಿಫಲವಾಗಿದೆ.ಇದರ ಪರಿಣಾಮ ಮುಂಬರುವ ಲೋಕಸಭಾ ಚುನಾವಣಾಯಲ್ಲಿ ಬಿಜೆಪಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಸರಕಾರದ ವಿರುದ್ದ ಆಕ್ರೋಶ ಹೊರಹಾಕಿದರು .

ಪ್ರತಿಭಟನೆಯಲ್ಲಿ ನಗರದ ಕಾಂಗ್ರೆಸ್ ಘಟಕದ ಮುಖಂಡರಾದ ಫೈಜಾನ ಸೇಠ ,ವಿಜಯಾ ಹಿರೇಮಠ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಇದ್ದರು .

loading...