ಧಾರ್ಮಿಕ ಕಾರ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನವಾಗಲಿ

0
0
loading...

ಧಾರ್ಮಿಕ ಕಾರ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನವಾಗಲಿ
ಕನ್ನಡಮ್ಮ ಸುದ್ದಿ- ಗೋಕಾಕ: ಇತ್ತಿÃಚಿನ ದಿನಗಳಲ್ಲಿ ಧಾರ್ಮಿಕ ಕಾರ್ಯಗಳು ಕಡಿಮೆಯಾಗುತ್ತಿದ್ದು ಜನರಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವ ಉದ್ದೆÃಶದಿಂದ ಸಾಮೂಹಿಕ ಧಾರ್ಮಿಕ ಕಾರ್ಯಗಳನ್ನು ಪ್ರತಿಯೊಂದು ಹಳ್ಳಿಗಳಲ್ಲಿ ಆಯೋಜನೆ ಮಾಡಲಾಗುತ್ತದೆ ಎಂದು ಕ್ಷೆÃತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾ ಜಿಲ್ಲಾ ನಿರ್ದೇಶಕ ಸುರೇಶ ಮೊಯ್ಲಿ ಹೇಳಿದರು.
ಶುಕ್ರವಾರದಂದು ತಾಲೂಕಿನ ಸುಲಧಾಳ ಗ್ರಾಮದ ಶ್ರಿÃ ಜಡಿಸಿದ್ದೆÃಶ್ವರ ಮಠದ ಸಭಾಭವನದಲ್ಲಿ ಶ್ರಿÃ ಕ್ಷೆÃತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾ, ಶ್ರಿÃ ವರಮಹಾಲಕ್ಷಿö್ಮÃ ಪೂಜಾ ಸಮಿತಿ ಸುಲಧಾಳ ಹಾಗೂ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಅಂಕಲಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಸಾಮೂಹಿಕ ಶ್ರಿÃ ವರಮಹಾಲಕ್ಷಿö್ಮÃ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವಿರೇಂದ್ರ ಹೆಗ್ಗಡೆಯವರ ಆಸೆಯದಂತೆ ಇಂತಹ ಧಾರ್ಮಿಕ ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಹಮ್ಮಿಕೊಂಡು ಜನರಲ್ಲಿ ಧಾರ್ಮಿಕ ಜಾಗೃತಿ ಮೂಡಿಸಿ ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಶ್ರಮಿಸಲಾಗುತ್ತದೆ ಎಂದು ಹೇಳಿದರು.
ಈ ಕಾರ್ಯಕ್ರಮವನ್ನು ಶ್ರಿÃ ಜಡಿಸಿದ್ದೆÃಶ್ವರಮಠದ ಶ್ರಿÃ ಮಾರ್ಕಂಡೇಯ ಮಹಾಸ್ವಾಮಿಜಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪ್ರವಚನಕಾರ ಮಾರುತಿ ಶರಣರು, ಯೋಜನಾಧಿಕಾರಿ ಸುರೇಂದ್ರಕುಮಾರ, ಗ್ರಾ.ಪಂ ಮಾಜಿ ಅಧ್ಯಕ್ಷ ಮಾರುತಿ, ತಾ.ಪಂ ಸದಸ್ಯ ನಿರ್ಮಲಾ, ನಿಂಗಪ್ಪ ಮೇಲ್ವಿಚಾರಕರಾದ ಲಕ್ಷಿö್ಮಶ,ಚಂದ್ರಹಾಸ ಸೇರಿದಂತೆ ಇತರರು ಇದ್ದರು.

loading...