ಬಿಜೆಪಿ ವಿರುದ್ಧ ಜಿಲ್ಲಾ ಜೆಡಿಎಸ್ ಘಟಕದಿಂದ ಪ್ರತಿಭಟನೆ

0
0
loading...

ಬಿಜೆಪಿ ವಿರುದ್ಧ ಜಿಲ್ಲಾ ಜೆಡಿಎಸ್ ಘಟಕದಿಂದ ಪ್ರತಿಭಟನೆ

ಕನ್ನಡಮ್ಮ ಸುದ್ದಿ- ಬೆಳಗಾವಿ: ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಬಿಜೆಪಿ ಅಡ್ಡಿ ಉಂಟು ಮಾಡುವ ಮೂಲಕ ಸಿಎಂ ಅವರಿಗೆ ಮಾನಸಿಕ ಕುಗ್ಗಿಸುವ ಕೆಲಸ‌ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ಇಂದು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಯಾಗಿರುವ ಕುಮಾರಸ್ವಾಮಿಯವರು ರಾಜ್ಯದ ರೈತರ ಸಾಲ ಮನ್ನಾ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಆದರೆ ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಮಾಜಿ ಮುಖ್ಯಮಂತ್ರಿಯವರು ಅಭಿವೃದ್ಧಿ ಯನ್ನು ಸಹಿಸಲಾಗದೆ ರಾಜ್ಯದಲ್ಲಿರುವ ಸಮ್ಮಿಶ್ರ ಸ ರ್ಕಾರವನ್ನು ಕೆಡುವ ಪ್ರಯತ್ನ ಮಾಡುತ್ತಿದ್ದಾರೆ.ಅಲ್ಲದೆ ರಾಜ್ಯದ ಅಭಿವೃದ್ಧಿ ಕೆಲಸವನ್ನು ಮಾಡಲು ಬಿಡದೆ ಮಾನಸಿಕ ಕುಗ್ಗಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ದಿಕ್ಕಾರ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ರಾಜ್ಯಾಧ್ಯಂತ ಬಿಜೆಪಿ‌ ವಿರುದ್ಧ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ, ಅಕಿಲಾ ಪಠಾಣ,ಗೀರಿಶ ಗೋಕಾಕ, ಸಂತೋಷ ಕೊಕಡಳ್ಳಿ, ಪ್ರಕಾಶ ಸೋನ್ವಾಳಕರ,ಸುಭಾಶ ಪೂಜಾರಿ , ಬಿ.ಎಸ್ ರುದ್ರಗೌಡ     ಸೇರಿದಂತೆ ಜೆಡಿಎಸ್ ಕಾರ್ಯಕರ್ತರು ಹಾಜರಿದ್ದರು.

loading...